ಮಕ್ಕಳ ವಿಶೇಷತೆ ಅರಿಯುವ ಶಿಕ್ಷಣ ಅಗತ್ಯ: ಉದಾಸಿ
ಲಕ್ಷ್ಮೇಶ್ವರ: ಪ್ರತಿ ಮಗುವಿನಲ್ಲಿ ವಿಶೇಷವಾದ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸುವ ಕಾರ್ಯವನ್ನು ಶಿಕ್ಷಕರು, ಪಾಲಕರು ಹಾಗೂ ಅಧಿಕಾರಿಗಳು ಮಾಡಬೇಕು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.
ಅವರು ಭಾನುವಾರ ಸಂಜೆ ಪಟ್ಟಣದ ಲಿಟಲ್ ಹಾರ್ಟ್ಸ್ ಇಂಟರ್ನ್ಯಾಶನಲ್ ಶಾಲೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಇಂದಿನ ಶಿಕ್ಷಣ ವ್ಯವಸ್ಥೆಯು ಮಗುವಿನಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವತ್ತ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಮಕ್ಕಳಲ್ಲಿ ನೈತಿಕತೆ ಅಧಃಪತನವಾದರೆ ಮುಂದಿನ ದಿನಗಳು ಗಂಡಾಂತರಕಾರಿಯಾಗಲಿವೆ. ಮಕ್ಕಳಿಗೆ ಸಮಾಜದಲ್ಲಿ ಹೇಗೆ ಬಾಳಬೇಕು, ಜನರೊಂದಿಗೆ ಹೇಗೆ ವರ್ತಿಸಬೇಕು ಎಂಬ ಮೌಲಿಕ ಶಿಕ್ಷಣ ನೀಡಬೇಕಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಮಾತನಾಡಿ, ಮಗುವಿನಲ್ಲಿ ಪ್ರಾದೇಶಿಕತೆ, ಜಾತೀಯತೆ, ಧಾರ್ಮಿಕ ಸಂಕುಚಿತ ಮನೋಭಾವನೆಯನ್ನು ದೂರ ಮಾಡುವುದು ಅವಶ್ಯವಾಗಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ಪರುತಪ್ಪ ಶಿರಹಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಮೇಶ ಶಿರಹಟ್ಟಿ, ಮಲ್ಲೇಶಪ್ಪ ದಲಾಲ, ಸಂಸ್ಥೆಯ ನಿರ್ದೇಶಕ ರಾಜು ಶಿರಹಟ್ಟಿ, ಫಕ್ಕೀರೇಶ ಶಿರಹಟ್ಟಿ ಮುಂತಾದವರು ಇದ್ದರು. ಸಿಆರ್ಪಿ ಬಸವರಾಜ ಕನವಳ್ಳಿ ಬಹುಮಾನ ವಿತರಿಸಿದರು. ಸಂಸ್ಥೆಯ ಕಾರ್ಯದರ್ಶಿ ಗಂಗಾಧರ ಶಿರಹಟ್ಟಿ ವಾರ್ಷಿಕ ವರದಿ ವಾಚನ ಮಾಡಿದರು. ಶಿಕ್ಷಕಿ ರಾಣಿ ದಲಾಲ ಸ್ವಾಗತಿಸಿದರು. ಶಾಲಾ ವಾರ್ಷಿಕೋತ್ಸವದ ವಿಶೇಷತೆ ಕುರಿತು ಮಿಸ್ ಶೀಲಾ ನುಡಿದರು. ಮುಖ್ಯಾಧ್ಯಾಪಕಿ ಶೋಭಾ ಉಮಚಗಿ ನಿರೂಪಿಸಿದರು. ರುಲೀನಾ ಲಂಗೋಟಿ ವಂದಿಸಿದರು. ನಂತರ ಮಕ್ಕಳಿಂದ ಮನರಂಜನೆ, ವೇಷ ಭೂಷಣ ಕಾರ್ಯಕ್ರಮಗಳು ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

