ಐಟಿಐ ಪರೀಕ್ಷೆಗೆ ಎಸ್‌ಎಂಎಸ್ ಮೂಲಕ ಉತ್ತರ
ಗದಗ: ಬೆಟಗೇರಿ ಹೊರವಲಯದಲ್ಲಿರುವ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಬುಧವಾರ ನಡೆಯುತ್ತಿದ್ದ ಫಿಟ್ಟರ್ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಮೂಲಕ ಉತ್ತರಗಳನ್ನು ಪಡೆದು ನಕಲು ಮಾಡುತ್ತಿದ್ದು, ಇದಕ್ಕೆ ಕೊಠಡಿಯ ಮೇಲ್ವಿಚಾರಕರು ಪರೋಕ್ಷವಾಗಿ ಸಹಾಯ ನೀಡಿದ ಘಟನೆಯೂ ನಡೆದಿದೆ. ಪರೀಕ್ಷೆ ಕೇಂದ್ರದಲ್ಲಿ ಅತ್ಯಾಧುನಿಕ ನಕಲು ನಡೆಯುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಕೆಲವರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಸಂದರ್ಭ ಈ ವಿಷಯ ತಿಳಿದು ಬಂತು.
ಘಟನೆ ವಿವರ: ಪ್ರಸಕ್ತ ಸಾಲಿನಿಂದ ಪ್ರಶ್ನೆಪತ್ರಿಕೆಯು ಪದ್ಧತಿಯಲ್ಲಿ ಬದಲಾವಣೆಯಾಗಿ ಆಯ್ಕೆ ಮಾದರಿಯ ಪ್ರಶ್ನೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಜಾಣತನ ಪ್ರದರ್ಶನ ಮಾಡಿದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಮೂಲಕ ಪ್ರಶ್ನೆಗಳನ್ನು ಎಸ್‌ಎಂಎಸ್ ಮೂಲಕ ಹೊರಗಿನ ಮೊಬೈಲ್‌ಗೆ ಸಂದೇಶ ರವಾನಿಸಿ, ಎಸ್‌ಎಂಎಸ್ ಮೂಲಕವೇ ಉತ್ತರ ಪಡೆದು ನಂತರ ಕೊಠಡಿಯಲ್ಲಿನ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುತ್ತಿದ್ದರು. ಇದಕ್ಕಾಗಿ ಪರೀಕ್ಷಾ ಕೇಂದ್ರದಲ್ಲಿದ್ದ ಟೇಬಲ್‌ನಲ್ಲಿ 3 ಮೊಬೈಲ್‌ಗಳನ್ನು ಇರಿಸಿಕೊಂಡಿದ್ದು ಪತ್ತೆಯಾಯಿತು. ಮಾಧ್ಯಮದ ಭೇಟಿ ಯಿಂದ ಕಂಗಾಲಾದ ಅಧಿಕಾರಿಗಳು ಯಾವುದೇ ತಪ್ಪು ನಡೆದಿಲ್ಲ ಎನ್ನುವ ರೀತಿ ವರ್ತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

