ಇಂದು ಪ್ರೌಢಶಾಲಾ ಶಿಕ್ಷಕರ ಜಿಲ್ಲಾ ಶೈಕ್ಷಣಿಕ ಸಮಾವೇಶ
ಗದಗ: ಗದಗ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲಾ ಶಿಕ್ಷಕರ ಜಿಲ್ಲಾ ಶೈಕ್ಷಣಿಕ ಸಮಾವೇಶ ಖಾಸಗಿ ಶಾಲೆಗಳ ಶೈಕ್ಷಣಿಕ ಸಮಸ್ಯೆಗಳು ಹಾಗೂ ಸವಾಲುಗಳ ಕುರಿತು ಚಿಂತನ ಗೋಷ್ಠಿ, ನಿವೃತ್ತ ಶಿಕ್ಷಕ ಶಿಕ್ಷಕೇತರಿಗೆ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪುರಸ್ಕಾರ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಫೆ. 28ರಂದು ಬೆಳಗ್ಗೆ 10ಕ್ಕೆ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎಸ್.ಎಂ. ಕೊಟಗಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಚಿನ್ನೂರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಪ್ರೌಢಶಾಲಾ ಮಂಡಳಿ ಹಾಗೂ ಗದಗ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘದ ಸಹಕಾರದೊಂದಿಗೆ ಆಯೋಜಿಸಿರುವ ಈ ಜಿಲ್ಲಾ ಶೈಕ್ಷಣಿಕ ಸಮಾವೇಶದ ಸಾನ್ನಿಧ್ಯವನ್ನು ಜ. ತೋಂಟದ ಡಾ. ಸಿದ್ಧಲಿಂಗ ಶ್ರೀಗಳು ವಹಿಸುವರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಶಾಸಕ ಬಿ.ಆರ್. ಯಾವಗಲ್ಲ, ಜಿ.ಎಸ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡದ ಆಯುಕ್ತ ಕೆ.ಆರ್. ಸುಂದರ, ಗದುಗಿನ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ವಿ. ರಾಜೇಂದ್ರಪ್ರಸಾದ, ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ವಿ.ಎಲ್. ಪಾಟೀಲ, ಗದಗ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಬಸವರಾಜ ಧಾರವಾಡ, ನಿವೃತ್ತ ಪ್ರಾಧ್ಯಾಪಕ ಎಸ್.ಟಿ. ಬ್ಯಾಕೋಡ ಭಾಗವಹಿಸಲಿದ್ದಾರೆ. ಗದಗ ಜಿಲ್ಲಾ ಖಾಸಗಿ ಶಿಕ್ಷಣ ಆಡಳಿತ ಮಂಡಳಿಗಳ ಸಂಘದ ಅಧ್ಯಕ್ಷ ಡಿ.ಬಿ. ಹುಯಿಲಗೋಳ ಅಧ್ಯಕ್ಷತೆ ವಹಿಸುವರು.
ವಿಶೇಷ ಉಪನ್ಯಾಸಕರಾಗಿ ಬೆಂಗಳೂರಿನ ಆಕ್ಸಪರ್ಡ್ ಡೆಂಟಲ್ ಕಾಲೇಜಿನ ಡಾ. ಕೆ.ಪಿ. ಪುತ್ತುರಾಜ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಿ ಅಭಿನಂಧಿಸಲಾಗುವುದು ಎಂದು ಕೆ.ಎ. ಹಿರೇಮಠ, ಕೆ.ಬಿ. ಭಜಂತ್ರಿ, ಎಂ.ಕೆ. ಲಮಾಣಿ, ಪಿ.ಜಿ. ಯಲವಗಿ ಮುಂತಾದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

