ಕೋಳಿವಾಡಗೆ ಸಚಿವ ಸ್ಥಾನಕ್ಕಾಗಿ ಕೇಶಮುಂಡನ
ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಜ. 1
ಅನುಭವಿ ಶಾಸಕ ಕೆ.ಬಿ. ಕೋಳಿವಾಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ತಾಪಂ ಉಪಾಧ್ಯಕ್ಷ ಗಣೇಶಪ್ಪ ಬಿಲ್ಲಾಳ ಕೇಶ ಮುಂಡನ ಮಾಡಿಸಿಕೊಳ್ಳುವ ಮೂಲಕ ಪ್ರತಿಭಟನೆ ನಡೆಸಿದರು.
ಐದು ಬಾರಿ ಶಾಸಕರಾಗಿರುವ ಕೋಳಿವಾಡರಿಗೆ ಮಂತ್ರಿ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮೀನ-ಮೇಷ ಎಣಿಸುತ್ತಿದ್ದಾರೆ. ಕೋಳಿವಾಡರಿಗೆ ತಕ್ಷಣ ಮಂತ್ರಿ ಸ್ಥಾನ ನೀಡಿ, ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ, ಹಾವೇರಿ ಅಭಿವೃದ್ಧಿಗೆ ಸಹಕರಿಸುವಂತೆ ಆಗ್ರಹಿಸಿದರು.
ಬಿಲ್ಲಾಳ ಅವರೊಂದಿಗೆ ಸಾರ್ವಜನಿಕವಾಗಿ ಕೇಶ ಮುಂಡನ ಮಾಡಿಸಿಕೊಂಡು ದಿಳ್ಳೆಪ್ಪ ಅಣ್ಣೇರ, ಮೇಡ್ಲೆರಿ ಗ್ರಾಪಂ ಸದಸ್ಯರಾದ ಗಣೇಶ ಕರ್ತಿಮಾಳಮ್ಮನವರ, ಕಲಿಂ ಶಿಕಲ್ಗಾರ, ರಾಮಪ್ಪ ಬಿಂಗೇರ, ಬೀರೇಶ ವ್ಯಾಪಾರಿ ಗಮನ ಸೆಳೆದರು.
ದಿಳ್ಳೆಪ್ಪ ಅಣ್ಣೇರ ಮಾತನಾಡಿ, ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಕೋಳಿವಾಡರು ಶಾಸಕರಾದರೆ ಸಚಿವ ಸ್ಥಾನ ನೀಡಿ, ಜಿಲ್ಲೆಯ ಉಸ್ತುವಾರಿ ವಹಿಸುವುದಾಗಿ ಭರವಸೆ ನೀಡಿದ್ದರು. ಈವರೆಗೂ ಏಕೆ ಸಚಿವ ಸ್ಥಾನ ನೀಡಿಲ್ಲ? ಕೋಳಿವಾಡರಿಗೆ ಶೀಘ್ರದಲ್ಲಿ ಸಚಿವ ಸ್ಥಾನ ನೀಡದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಗ್ರಾಪಂ ಸದಸ್ಯ ಕರಿಯಪ್ಪ ಬಿಲ್ಲಾಳ, ಗ್ವಾರಜ್ಜ ಗೂರಮಾಳದ, ನಾಗಪ್ಪ ಪೂಜಾರ, ವಿಷ್ಣಪ್ಪ ಪೂಜಾರ, ರಾಜೇಂದ್ರ ಅಂಬಿಗೇರ ಇದ್ದರು. ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ ಸ್ಪೀಡ್ ಪೋಸ್ಟ್ ಮೂಲಕ ಸಿದ್ದರಾಮಯ್ಯ ಅವರಿಗೆ ಮನವಿ ರವಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

