ವಿಕಲಚೇತನರಿಗೆ ಶಿಬಿರ
ಗದಗ: 2013-14ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯ ವಿಕಲಚೇತನರಿಗೆ ಅಂಗವಿಕಲತೆಯು ಶಸ್ತ್ರ ಚಿಕಿತ್ಸೆಯ ಮೂಲಕ ನಿವಾರಣೆಯಾಗುವುದರಿಂದ ಅಂತಹ ಅರ್ಹ ವಿಕಲಚೇತನರಿಗೆ ಅಗತ್ಯ ವೈದ್ಯಕೀಯ ಶಸ್ತ್ರ ಚಿಕಿತ್ಸೆ ಕೈಗೊಳ್ಳಲು ಪೂರ್ವಭಾವಿಯಾಗಿ ಪರಿಶೀಲನಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಹಾಜರಾಗಲು ಅರ್ಹ ವಿಕಲಚೇತನರಿಂದ ಹೆಸರು ನೋಂದಾಯಿಸಲು ಕೋರಲಾಗಿದೆ. ಹೆಸರು ನೋಂದಾಯಿಸಲು ಬಯಸುವವರು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದ ಎದುರಿಗೆ, ಗದಗ ಇವರಲ್ಲಿ ಖುದ್ದಾಗಿ ಅಗತ್ಯ ದಾಖಲಾತಿಗಳೊಂದಿಗೆ ಜ. 7 ರೊಳಗೆ ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಿ.ಎನ್. ಮೂಲಿಮನಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ (9900124253, 08372-220419) ಗದಗ ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಸಕಾಲ ತಂತ್ರಾಂಶ ಅಳವಡಿಕೆಗೆ ಸೂಚನೆ
ಗದಗ: ಜಿಲ್ಲೆಯಲ್ಲಿ ಸಕಾಲದ ಅರ್ಜಿಗಳನ್ನು ಕಡ್ಡಾಯವಾಗಿ ಅದಕ್ಕಾಗಿ ನಿಗದಿಪಡಿಸಿ ತಂತ್ರಾಂಶದಲ್ಲಿ ಅಳವಡಿಸಿ ಸ್ವೀಕರಿಸಲು ಹಾಗೂ ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಲು ಸಂಬಂಧಿತ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಆದ್ಯತೆಯ ಮೇಲೆ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

