ಗದಗ

ಇಂದು ಶ್ರದ್ಧಾಂಜಲಿ

Published On :

ಲಕ್ಷ್ಮೇಶ್ವರ:  ಪಟ್ಟಣದ ಸ್ಕೂಲ್ ಚಂದನದ ವಿದ್ಯಾರ್ಥಿಗಳಿಂದ ಈಚೆಗೆ ಅಗಲಿದ ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪನವರಿಗೆ ಗಾನ ನುಡಿನಮನ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜ. 3ರ ಮಧ್ಯಾಹ್ನ 3 ಗಂಟೆಗೆ ಸ್ಕೂಲ್ ಚಂದನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಟಿ. ಈಶ್ವರ ಹೇಳಿದರು.
ಅವರು ಮಂಗಳವಾರ ಪಟ್ಟಣದ ಸ್ಕೂಲ್ ಚಂದನ ಶಾಲೆಯಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಎಸ್‌ಎಸ್‌ರವರ ಭಾವಪೂರ್ಣ ನುಡಿನಮನ ಕಾರ್ಯಕ್ರಮಕ್ಕೆ ಸಾಹಿತ್ಯ ಸಂಶೋಧಕ ಹಾಗೂ ವಿಮರ್ಶಕ ಡಾ. ಎಂ.ಎಂ. ಕಲಬುರ್ಗಿ ಹಾಗೂ ಸಾಹಿತಿ ಡಾ. ಮನು ಬಳಿಗಾರ ಸೇರಿದಂತೆ ಗದಗ ಜಿಲ್ಲೆಯ ಕಸಾಪ ಅಧ್ಯಕ್ಷ ಡಾ. ಶಿವಣ್ಣ ಕುರಿ, ಧಾರವಾಡ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಹಾವೇರಿ ಜಿಲ್ಲಾ ಕಸಾಪ ಅಧ್ಯಕ್ಷ ಜಿ.ಬಿ. ಮಾಸಣಗಿ, ಸಾಹಿತಿ ಮೋಹನ ನಾಗಮ್ನನವರ ಹಾಗೂ 3 ಜಿಲ್ಲೆಗಳ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರುಗಳು ಸೇರಿದಂತೆ ಅನೇಕ ಸಾಹಿತಿಗಳು ಆಗಮಿಸುವರೆಂದು ತಿಳಿಸಿದರು. ಚಂದನದ ವಿದ್ಯಾರ್ಥಿಗಳು ಜಿಎಸ್‌ಎಸ್ ವಿರಚಿತ ಭಾವಗೀತೆಗಳಿಗೆ ರಾಗ ಸಂಯೋಜನೆ ಮಾಡಿ ಶಾಸ್ತ್ರೀಯ ಹಾಗೂ ಹಿಂದೂಸ್ತಾನಿ ಸಂಗೀತದ ಮುಖಾಂತರ ಗಾನನುಡಿ ನಮನದ ಮೂಲಕ ಜಿಎಸ್‌ಎಸ್‌ರವರ ಚಿರಾತ್ಮಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಿದ್ದಾರೆ.  ಸಾಹಿತ್ಯಾಸಕ್ತರು, ಸಾಹಿತಿಗಳು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಯುವ ಕವಿಗಳು, ಸಾಹಿತಿಗಳು ಆಗಮಿಸಬೇಕೆಂದು ಟಿ. ಈಶ್ವರ ಮನವಿ ಮಾಡಿದರು. ಸಂಸ್ಥೆಯ ಗೌರವ ನಿರ್ದೇಶಕ ಎಸ್.ಸಿ. ರಟಗೇರಿ, ಪ್ರಾಚಾರ್ಯ ಚಂದ್ರಹಾಸ ಪಟಗಾರ ಮುಂತಾದವರು ಹಾಜರಿದ್ದರು.
ಇಂದು ಜಾತ್ರೆ
ರೋಣ:  ತಾಲೂಕಿನ ಹೊಳೆಹಡಗಲಿ ಗ್ರಾಮದ ಚಂದ್ರಮೌಳೇಶ್ವರ ದೇವರ ಜಾತ್ರಾಮಹೋತ್ಸವವು ಜ. 3ರ ಸಂಜೆ 5.30ಗಂಟೆಗೆ ಜರುಗಲಿದೆ. ಅಂದು ಬೆಳಗ್ಗೆ 7 ಗಂಟೆಗೆ ಚಂದ್ರಮೌಳೇಶ್ವರ ದೇವರಿಗೆ ವಿಶೇಷ ಪೂಜೆ ಜರುಗಲಿದ್ದು, ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ದೇವಸ್ಥಾನದ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.
ನಾಳೆ ವಿದ್ಯುತ್ ವ್ಯತ್ಯಯ
ಗದಗ:  110 ಕೆವಿ ಬೆಳ್ಳಟ್ಟಿ ಉಪವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ವಿದ್ಯುತ್ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಜ. 4ರ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಕಾರಣ 110 ಕೆವಿ ಬೆಳ್ಳಟ್ಟಿ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ 33 ಕೆವಿ ಸೂರಣಗಿ, ಹಾಗೂ 33ಕೆವಿ ಹೊಳೆಇಟಗಿ ಮತ್ತು 11 ಕೆವಿ ವಿತರಣಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕಾರಣ ಸಾರ್ವಜನಿಕರು ಪ್ರಕಟಣೆ ಗಮನಿಸಿ ಹೆಸ್ಕಾಂ ಇಲಾಖೆಯೊಂದಿಗೆ ಸಹಕರಿಸುವಂತೆ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.