ಗದಗ

ತಟ್ಟೆ ತಯಾರಿಕೆಗೆ ತರಬೇತಿ

Published On :

ಗದಗ:  ಅಡಕೆ ಹಾಳೆಯಿಂದ ಊಟದ ತಟ್ಟೆ, ಕಪ್ ಮುಂತಾದವುಗಳ ತಯಾರಿಕೆ ಕುರಿತಂತೆ ಬೆಂಗಳೂರಿನ ಸಣ್ಣ ಕೈಗಾರಿಕಾ ಅಭಿವೃದ್ಧಿ ಕೇಂದ್ರವು ತರಬೇತಿ ಕಾರ್ಯಕ್ರಮ ಆಯೋಜಿಸಿದೆ. ಜ. 27 ರಿಂದ 5 ದಿನಗಳ ಕಾಲ ನಡೆಯುವ ಈ ತರಬೇತಿಗೆ ಎಸ್.ಎಸ್.ಎಲ್.ಸಿ. ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಬಿಳಿ ಹಾಳೆಯಲ್ಲಿ ಸ್ವ-ವಿವರದ ಹಾಗೂ ಸಂಪರ್ಕ ವಿವರಗಳನ್ನು ಬರೆದು ನಿರ್ದೇಶಕರು, ಎಂ.ಎಸ್.ಎಂ.ಇ.ಡಿ 1 ಭಾರತ ಸರ್ಕಾರ, ರಾಜಾಜಿನಗರ, ಬೆಂಗಳೂರು-560010 ಇವರಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ 080-23151581 ಇಲ್ಲಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಅಂತಿಮ ಪಟ್ಟಿ ಪ್ರಕಟ
ಗದಗ:  2013-14 ನೇ ಸಾಲಿನ ಬಿ.ಇಡಿ. ಕೋರ್ಸ್‌ಗೆ ಸರ್ಕಾರಿ ಕೋಟಾದ ಸೀಟುಗಳ ಅಂತಿಮ ಪಟ್ಟಿಯನ್ನು ಜ. 3 ರಂದು ಇಲಾಖಾ ವೆಬ್‌ಸೈಟ್ ಢಿಢಿಢಿ.ಝ್ಛ್ಟ್ಟಟಜಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ.್ಝಟಿ ನಲ್ಲಿ ಪ್ರಕಟಿಸಲಾಗುವುದು. ಈ ಪಟ್ಟಿಯನ್ನು ಡಯಟ್, ಕಳಸಾಪುರ ರಸ್ತೆ ಗದಗ ಕಚೇರಿಯಲ್ಲಿ ಜ. 4ರಂದು ಪ್ರಕಟಿಸಲಾಗುತ್ತದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಹಂಚಿಕೆಯಾದ ಸಂಸ್ಥೆ ಒಪ್ಪಿಗೆಯಾದಲ್ಲಿ ಎಲ್ಲ ಮೂಲ ದಾಖಲೆಗಳನ್ನು ಜ. 4 ರಿಂದ 10 ರೊಳಗೆ ಸಲ್ಲಿಸಿ ದಾಖಲಾತಿ ಪಡೆದುಕೊಳ್ಳುವಂತೆ ಡಯಟ್ ಪ್ರಾಚಾರ್ಯ ಬಿ.ಎಸ್. ರಘುವೀರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.