ಗದಗ

ಸಮಾಜದಲ್ಲಿ ಮಹಿಳೆಯರಿಗೆ ಗೌರವ ಸ್ಥಾನ: ಕೃಷ್ಣವೇಣಿ

Published On :

ಗದಗ: ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ಪೂಜ್ಯನೀಯ ಸ್ಥಾನ ನೀಡಲಾಗಿದೆ. ಇಂದಿನ ಆಧುನಿಕ ದಿನಗಳಲ್ಲಿ ಮಹಿಳೆ ಪುರುಷನಷ್ಟೇ ಗೌರವ ಸ್ಥಾನ ಹೊಂದಿದ್ದಾಳೆ ಎಂದು ಗದಗ ಶಹರ ಪೊಲೀಸ್ ಠಾಣೆಯ ಪಿಎಸ್‌ಐ ಕೃಷ್ಣವೇಣಿ ಗುರ್ಲಹೊಸೂರ ಅಭಿಪ್ರಾಯಪಟ್ಟರು.
ಅವರು ಈಚೆಗೆ ನಗರದ ಮದ್ಲಿ ಓಣಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ರೆಡ್‌ಸ್ಟಾರ್ ಕ್ಲಬ್‌ನ 9ನೇ ವಾರ್ಷಿಕೋತ್ಸವ ಹಾಗೂ ಮಹಿಳಾ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಇಂದು ಎಲ್ಲ ರಂಗದಲ್ಲೂ ಮುನ್ನಡೆ ಸಾಧಿಸುತ್ತಿರುವದು ಸ್ವಾಗತಾರ್ಹ ಸಂಗತಿ. ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ನಡೆದ ಈ ಕಾರ್ಯಕ್ರಮ ಮೋಜು ಮಸ್ತಿ ಮಾಡದೇ ಭಾರತೀಯ ಸಂಸ್ಕೃತಿ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆಗೆ ಮಹಿಳೆಯರನ್ನು ಜಾಗೃತಿಗೊಳಿಸುವ ರೀತಿಯಲ್ಲಿ ಕವಿಗೋಷ್ಠಿಯನ್ನು ಏರ್ಪಡಿಸುವ ಮೂಲಕ ರೆಡ್‌ಸ್ಟಾರ್ ಕ್ಲಬ್ ತನ್ನ 9ನೇ ವಾರ್ಷಿಕೋತ್ಸವ ಆಚರಿಸುತ್ತಿರುವುದು ಕ್ಲಬ್‌ನ ಸಾಂಸ್ಕೃತಿಕ ಪ್ರಜ್ಞೆಯನ್ನು ಮತ್ತು ಸಾಮಾಜಿಕ ಕಾಳಜಿ ಬಿಂಬಿಸುತ್ತದೆ ಎಂದರು.
ಅತಿಥಿಗಳಾಗಿ ಆಗಮಿಸಿದ್ದ ಗೀತಾಂಜಲಿ ಮೆಣಸಿನಕಾಯಿ ಮಾತನಾಡಿ, ಮಹಿಳೆಯರಿಂದ ಮಹಿಳೆಯರಿಗಾಗಿಯೇ ವಿಶೇಷವಾಗಿ ರೂಪಿಸಲಾಗಿರುವ ಈ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ. ಮಹಿಳೆಯರನ್ನು ಒಂದುಗೂಡಿಸುವ ಹಾಗೂ ಅವರಲ್ಲಿ ಜಾಗೃತಿ ಉಂಟು ಮಾಡುವ ಅಪರೂಪದ ಕಾರ್ಯಕ್ರಮವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ನಗರಸಭೆಯ ಸದಸ್ಯೆ ಪಾರ್ವತಿ ಪತ್ತಾರ ಮಾತನಾಡಿದರು. ಮಹಿಳಾ ಕವಿಗೋಷ್ಠಿಯಲ್ಲಿ ಬಿ.ಎನ್.
ತಾರಾ, ಜಯಶ್ರೀ ಶ್ರೀಗಿರಿ, ಭಾಗ್ಯಲಕ್ಷ್ಮೀ ಘಳಗಿ, ಶೋಭಾ ಶಲವಡಿ ಅವರು ತಮ್ಮ ಸ್ವರಚಿತ ಕವನ ವಾಚಿಸಿದರು.
ನಂತರ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸೀಮಾ, ಜಯಶ್ರೀ ಕುಂದಗೋಳ, ರೆಡ್‌ಸ್ಟಾರ್ ಕ್ಲಬ್‌ನ ಗೌರವಾಧ್ಯಕ್ಷ ದೀಪಕ ರೇವಣಕರ, ಅಧ್ಯಕ್ಷ ಬಸವರಾಜ ಪತ್ತಾರ, ಕಾರ್ಯದರ್ಶಿ ಮಹ್ಮದಶಫಿ ನಾಗರಕಟ್ಟಿ ಸೇರಿದಂತೆ ಮಂಜುಶ್ರೀ ಮಹಿಳಾ ಸ್ವಸಹಾಯ ಗುಂಪಿನ ಸರ್ವ ಸದಸ್ಯರು, ಗುರುಹಿರಿಯರು, ಯುವಕರು ಪಾಲ್ಗೊಂಡಿದ್ದರು. ಕವಿತಾ ಬಾಳಿಹಳ್ಳಿಮಠ ಪ್ರಾರ್ಥಿಸಿದರು. ದೀಕ್ಷಾ ರೇವಣಕರ ಸ್ವಾಗತಿಸಿದರು. ಸುಮಾ ಪತ್ತಾರ ಹಾಗೂ ಮಂಜುಳಾ ಮಂಡಲಗೇರಿ ನಿರೂಪಿಸಿದರು. ಸೌಮ್ಯಾ ಮಂಡಲಗೇರಿ ವಂದಿಸಿದರು.
ಉಚಿತ ಆರೋಗ್ಯ ತಪಾಸಣಾ ಶಿಬಿರ
ಗದಗ:  ಕೆ.ಎಲ್.ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಘಟಕವು ಹಮ್ಮಿಕೊಂಡ ವಿಶೇಷ ಶಿಬಿರದ ಅಂಗವಾಗಿ ಡಿ.ಜಿ.ಎಂ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಹಾಗೂ ಎನ್.ಎಸ್.ಎಸ್. ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಗದಗನ ಎಸ್.ಎಂ. ಕೃಷ್ಣ ನಗರ ಆಶ್ರಯ ಕಾಲೋನಿಯಲ್ಲಿ ಈಚೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಡಿ.ಜಿ.ಎಂ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ವೈದ್ಯೆ ಡಾ. ಕಮಲಾಕ್ಷಿ ಅಂಗಡಿ ಮತ್ತು ಡಾ. ಕುಮಾರ.ಸಿ. ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಾದ ರಾಜು ಮತ್ತು ಅಕ್ಕಮ್ಮ ಇವರು ರೋಗಿಗಳ ಆರೋಗ್ಯ ತಪಾಸಣೆ ನಡೆಸಿ ಉಚಿತವಾಗಿ ಔಷಧಗಳನ್ನು ವಿತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.