ಅಶಾಂತಿಗೆ ಮೌಲ್ಯಗಳ ಕುಸಿತವೇ ಕಾರಣ
ಗದಗ: ಸಮಾಜದಲ್ಲಿನ ದುಃಖ, ಅಶಾಂತಿಗೆ ಮೌಲ್ಯಗಳ ಕುಸಿತವೇ ಕಾರಣ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಜಯಂತಿ ಹೇಳಿದರು. ಅವರು ಈಚೆಗೆ ಸ್ಥಳೀಯ ಬಸವೇಶ್ವರ ನಗರದಲ್ಲಿರುವ ಈಶ್ವರೀಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಪೊಲೀಸ್ ಸಿಬ್ಬಂದಿಗೆ ಮೌಲ್ಯಗಳು ಮತ್ತು ಮಾನಸಿಕ ಒತ್ತಡ ನಿರ್ವಹಣೆ ಕುರಿತು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು. ಈಶ್ವರೀಯ ವಿಶ್ವವಿದ್ಯಾಲಯ ಮನಸ್ಸನ್ನು ವ್ಯವಸ್ಥಿತವಾಗಿ ಇಟ್ಟುಕೊಳ್ಳುವ ತರಬೇತಿಯನ್ನು ನೀಡುತ್ತಿದೆ. ಆಧ್ಯಾತ್ಮಿಕ ಆರೋಗ್ಯದ ತಳಹದಿಯ ಮೇಲೆ ಉಳಿದ ಎಲ್ಲ ಆರೋಗ್ಯವು ನೆಲೆಗೊಳ್ಳಲು ಸಾಧ್ಯ ಎಂದರು. ಸಿಪಿಐ ಟಿ. ಫೈಜುದ್ದೀನ್ ಉದ್ಘಾಟಿಸಿ ಮಾತನಾಡಿದರು. ಕರಿಯಪ್ಪ ಗಾಂಜಿ ಸೇರಿದಂತೆ ಜಿಲ್ಲೆಯ ನೂರಾರು ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

