ಗದಗ

ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳಲು ಒತ್ತಾಯ

Published On :


ಗದಗ:  ಅವಳಿ ನಗರದ ಒಕ್ಕಲಗೇರಿ ಓಣಿಯ ಗಂಜೀಬಸವೇಶ್ವರ ದೇವಸ್ಥಾನದಿಂದ ವೀರಶೈವ ರುದ್ರಭೂಮಿ, ರೆಹ್ಮತ್ ನಗರದ ಮೂಲಕ ಅಂಡರ್ ಬ್ರೀಡ್ಜ್ವರೆಗೆ ಸಿ.ಸಿ. ರಸ್ತೆ ಕಾಮಗಾರಿ ಕೈಗೊಳ್ಳಲು ಈ ಹಿಂದೆ ರಸ್ತೆಯನ್ನು ಸಂಪೂರ್ಣವಾಗಿ ಅಗೆದು ಹಾಗೇ ಬಿಟ್ಟಿರುವುದರಿಂದ ರಸ್ತೆಯು ದೊಡ್ಡ ಪ್ರಮಾಣದ ತೆಗ್ಗು ದಿನ್ನೆಗಳಿಂದ ಕೂಡಿರುತ್ತವೆ. ಈ ಭಾಗದಲ್ಲಿ ಜನವಸತಿ ಹಾಗೂ ರೈತಾಪಿ ಜನರು ಹೆಚ್ಚಿಗೆ ಇದ್ದು ಪ್ರತಿದಿನ ಚಕ್ಕಡಿ ಹಾಗೂ ವಾಹನಗಳ ಮೂಲಕ ಜಮೀನುಗಳಿಗೆ ಹೋಗಿ ಬರಲು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಸಿ.ಸಿ. ರಸ್ತೆ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಈ ಭಾಗದ ಸಾರ್ವಜನಿಕರಿಗೆ ಮತ್ತು ವಾಹನಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಹಾಗೂ ಗದಗ ಬೆಟಗೇರಿ ನಗರಸಭೆ ಆಯುಕ್ತರಿಗೆ ಗದಗ ಚೇಂಬರ್ ಸಂಸ್ಥೆಯ ಅಧ್ಯಕ್ಷ ಎಲ್.ಸಿ. ಲಿಂಬಯ್ಯಸ್ವಾಮಿಮಠ ಮತ್ತು ಗೌರವ ಕಾರ್ಯದರ್ಶಿ ವೀರಣ್ಣ ಬೇವಿನಮರದ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.