ರಕ್ತದ ಗುಂಪಿನ ತಿಳಿವಳಿಕೆ ಅವಶ್ಯ
ಮುಂಡರಗಿ: ದುರಂತ ಅಥವಾ ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ನಮ್ಮ ರಕ್ತದಾನ ಮಾಡಬೇಕಾದರೆ ಇಂದು ಎಲ್ಲರೂ ತಮ್ಮ ತಮ್ಮ ರಕ್ತದ ಗುಂಪನ್ನು ತಿಳಿದುಕೊಳ್ಳುವುದು ಅವಶ್ಯ ಎಂದು ತಾಪಂ ಸದಸ್ಯ ಪಾಲಾಕ್ಷಗೌಡ ಪಾಟೀಲ ಹೇಳಿದರು.
ಭಾನುವಾರ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಸುಜಲಾನ್ ಫೌಂಡೇಶನ್ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ರಕ್ತ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಸುಜಲಾನ್ ಫೌಂಡೇಶನ್ನಿಂದ ರಕ್ತದ ಗುಂಪನ್ನು ಗುರುತಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅವರ ಸಾಮಾಜಿಕ ಕಾಳಜಿ ಎತ್ತಿ ತೋರಿಸುತ್ತದೆ. ಸಂಘ-ಸಂಸ್ಥೆಗಳು ಇಂಥ ಜನಪರ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತಾಗಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ಮಾತನಾಡಿ, ಇಂದು ಅನೇಕ ಜನರಿಗೆ ಹಾಗೂ ಮಕ್ಕಳಿಗೆ ತಮ್ಮ ರಕ್ತದ ಗುಂಪಿನ ಬಗ್ಗೆ ಮಾಹಿತಿಯೇ ಇಲ್ಲ. ಇತ್ತೀಚಿನ ದಿನಗಳಲ್ಲಿ ಅನೇಕರು ರಕ್ತಹೀನತೆಯಿಂದಾಗಿ ಬಳಲುತ್ತಿದ್ದು, ಪ್ರತಿಯೊಬ್ಬರಿಗೂ ಅವರ ರಕ್ತದ ಗುಂಪಿನ ಬಗ್ಗೆ ತಿಳಿದುಕೊಳ್ಳುವುದು ಅತಿ ಅವಶ್ಯ. ಇಂತಹ ಸಂದರ್ಭ ಸುಜಲಾನ್ ಫೌಂಡೇಶನ್ ಶಾಲಾ ಮಕ್ಕಳ ರಕ್ತ ತಪಾಸಣೆ ಕಾರ್ಯ ಮೆಚ್ಚುವಂತದ್ದು ಎಂದರು.
ಸುಜಲಾನ್ ಫೌಂಡೇಶನ್ ಯೋಜನಾಧಿಕಾರಿ ರಾಜೇಂದ್ರ ಪ್ರಸಾದ್ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಧುಕೇಶ್ವರ ಪ್ರೌಢಶಾಲೆಯ ಸುಮಾರು 180ಕ್ಕೂ ಹೆಚ್ಚು ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ತಿಪ್ಪಾಪುರದ 35 ವಿದ್ಯಾರ್ಥಿಗಳು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಒಟ್ಟು 300 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಡಾ. ದತ್ತಾತ್ರೆಯ ಎಂ. ವೈಕುಂಟೆ ಅವರಿಂದ ರಕ್ತ ತಪಾಸಣೆ ಮಾಡಿಸಿಕೊಂಡರು. ಕಾರ್ಯಕ್ರಮದಲ್ಲಿ ಮುಧುಕೇಶ್ವರ ಪ್ರೌಢಶಾಲೆಯ ಎಂ. ರಂಗಣ್ಣ, ಸುಜಲಾನ್ ಫೌಂಡೇಶನ್ ಯೋಜನಾ ಸಂಯೋಜಕ ವಿನಯಕುಮಾರ, ಶಿಕ್ಷಕ ಎಸ್.ಕೆ. ರಾಜೂರ ಇತರರಿದ್ದರು. ಶಿಕ್ಷಕ ಎಂ. ರಂಗಣ್ಣ ಸ್ವಾಗತಿದರು. ಎನ್.ಕೆ. ನಿರೂಪಿಸಿದರು. ಜಗದೀಶ ಗೌಡರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

