ಗದಗ

ಗುಣಮಟ್ಟದ ಶಿಕ್ಷಣಕ್ಕೆ ಕಲಿಕೋತ್ಸವ ಪೂರಕ: ಬಾನಿ

Published On :

ಕನ್ನಡಪ್ರಭ ವಾರ್ತೆ, ಗದಗ, ಜ. 6
ಸರ್ಕಾರ ಇಂದು ಶೈಕ್ಷಣಿಕ ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಅಮೂಲಾಗ್ರ ಬದಲಾವಣೆಗೆ ಅವಕಾಶ ಕಲ್ಪಿಸಿದೆ. ಆ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಗುಣಮಟ್ಟದ ಕಲಿಕೆಯ ದೃಢೀಕರಣಕ್ಕಾಗಿ ಕಲಿಕೋತ್ಸವ ಪೂರಕವಾಗಿದೆ ಎಂದು ಹುಯಿಲಗೋಳ ಗ್ರಾಪಂ ಅಧ್ಯಕ್ಷ ಆರ್.ವಿ. ಬಾನಿ ಹೇಳಿದರು.
ಅವರು ಈಚೆಗೆ ತಾಲೂಕಿನ ಕಿರಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹುಯಿಲಗೋಳ ಕ್ಲಸ್ಟರ್‌ಮಟ್ಟದ ಕಲಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರು ಮತ್ತು ಪಾಲಕರು ಸಮುದಾಯ ಮಕ್ಕಳಲ್ಲಿ ಮೌಲ್ಯಯುತ ಬದುಕನ್ನು ಕಟ್ಟುವಲ್ಲಿ ಹೆಚ್ಚು ಗಮನಹರಿಸುವಂತೆ ತಿಳಿಸಿದರು. ಅಧ್ಯಕ್ಷತೆವಹಿಸಿ ಪ್ರಶಸ್ತಿ ಪತ್ರ ವಿತರಿಸಿದ ಉತ್ತಮ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಶಸ್ತಿ ಪುರಸ್ಕೃತ ಎಸ್.ಡಿ. ಕಟಕಟೆ ಮಾತನಾಡಿ, ಸರ್ಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಹೆಚ್ಚು ಜವಾಬ್ದಾರರಾಗಿದ್ದು, ತಮ್ಮ ಪಾಲಿನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಿ ಯೋಜನೆಗಳ ಯಶಸ್ವಿಯ ಜತೆಗೆ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಸಫಲತೆ ಹೊಂದಬೇಕು ಎಂದರು.
ಸಿ.ಆರ್.ಪಿ. ಬಿ.ವೈ. ಡೊಳ್ಳಿನ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಎಂ.ಸಿ. ಸದಸ್ಯ ಫಕ್ಕೀರಪ್ಪ ಬಕನಿಂಗಿ, ಕಲ್ಲಪ್ಪ ಹಡಪದ, ಎಸ್.ಪಿ. ಹೂಗಾರ, ಮುಖ್ಯೋಪಾಧ್ಯಾಯ ಆರ್.ಎಸ್. ಗುಜ್ಜಲ, ವೈ.ಡಿ. ರತ್ನಗಿರಿ, ಎಂ.ಎಲ್. ಅಯ್ಯನಗೌಡರ, ಪಿ.ಆರ್. ನಿಡಗುಂದಿ, ಸುರೇಶ ಜೋಗಿನ, ಆರ್.ಜಿ. ಪಾಟೀಲ, ಕೆ.ಎಂ. ಗೌಡರ, ಎ.ವಿ. ಯಾಳವಾರ, ಸುನಂದಾ ಕಲಾದಗಿ, ಗೊಡಚಪ್ಪ, ಎಸ್.ಎಸ್. ಚಟ್ರಿ, ಎನ್.ವಿ. ಕವಲೂರ, ಸಿ.ಎಂ. ಕೊಂಗವಾಡ, ಪ್ರವೀಣ ಮಡಿವಾಳರ, ಸಿ.ಎಫ್. ಬಡಿಗೇರ ಮುಂತಾದವರು ಉಪಸ್ಥಿತರಿದ್ದರು. ಎ.ಎಸ್. ಕಮ್ಮಾರ ಸ್ವಾಗತಿಸಿದರು. ವೈ.ಎಚ್. ಹನುಮಂತಗೌಡರ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.