ಗದಗ

ಸಂಘಟನೆಯಲ್ಲಿ ಯುವಕರ ಪಾತ್ರ ಪ್ರಮುಖ

Published On :

ಮುಂಡರಗಿ:  2012ರಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಜರುಗಿದ ಅಧಿವೇಶನದ ಸಂದರ್ಭದಲ್ಲಿ ಪಂಚಮಸಾಲಿ ಸಮಾಜವನ್ನು 2ಎಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯಲ್ಲಿ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಅಭಿನಂದನಾರ್ಹ ಎಂದು ಜಿಲ್ಲಾ ಯುವ ಪಂಚಮಸಾಲಿ ಸಂಘದ ಜಿಲ್ಲಾ ಅಧ್ಯಕ್ಷ ಶಶಿಧರ ದಿಂಡೂರ ಹೇಳಿದರು.
ಭಾನುವಾರ ಮುಂಡರಗಿ ಪಟ್ಟಣದ ತೋಂಟದಾರ್ಯ ಮಠದಲ್ಲಿ ಜರುಗಿದ ಪಂಚಮಸಾಲಿ ಸಮಾಜದ ಸಭೆಯಲ್ಲಿ ತಾಲೂಕು ಯುವ ಪಂಚಮಸಾಲಿ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಮಾತನಾಡಿದರು.
ಫೆಬ್ರವರಿ ತಿಂಗಳಲ್ಲಿ ಗದಗದಲ್ಲಿ ರಾಜ್ಯಮಟ್ಟದ ಪಂಚಮಸಾಲಿ ಯುವ ಘಟಕದ ಸಮಾವೇಶವನ್ನು ಮಾಡಲು ನಿರ್ಧರಿಸಲಾಗಿದೆ ಎಂದರು.
ಬಸವರಾಜ ದೇಸಾಯಿ ಮಾತನಾಡಿ, ಸಮಾಜದ ಬಗ್ಗೆ ಪ್ರತಿಯೊಬ್ಬ ಯುವಕರಲ್ಲಿಯೂ ಕಳಕಳಿ ಮೂಡಬೇಕು ಎಂದರು.
ಜಿಲ್ಲಾ ಕಾರ್ಯದರ್ಶಿ ಶರಣಪ್ಪ ಜಿಗಳೂರ, ತಾಲೂಕು ಕಾರ್ಯದರ್ಶಿ ಬಸವರಾಜ ನವಲಗುಂದ, ಯುವ ಪಂಚಮಸಾಲಿ ಘಟಕದ ನೂತನ ಅಧ್ಯಕ್ಷ ಮಂಜುನಾಥ ಮುಧೋಳ ಮಾತನಾಡಿದರು. ತಾಲೂಕು ಪಂಚಮಸಾಲಿ ಸಂಘದ ಅಧ್ಯಕ್ಷ ಕೊಟ್ರಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಎಸ್.ಎಸ್. ಸಂಕಣ್ಣವರ, ಸಣ್ಣಲೋಕಪ್ಪ ನಂದಿಕೋಲ, ನಿಂಗಜ್ಜ ನಾಲ್ಕುರುವಿ, ನಾನಾಸಾಹೇಬ ದೇಸಾಯಿ, ಕುಮಾರ ನಾಲ್ಕುರುವಿ, ಈರಣ್ಣ ಬಾಗೇವಾಡಿ, ವೀರಣ್ಣ ಘಟ್ಟಿ, ಮಂಜುನಾಥ ಗೋಡಿ, ಕುಮಾರ ಬನ್ನಿಕೊಪ್ಪ, ಯಲ್ಲಪ್ಪ ಹೊಂಬಳಗಟ್ಟಿ, ಪ್ರಸಾದ ಗೊಂಡಬಾಳ, ಶಿವಕುಮಾರ ಕಾಮಣ್ಣವರ, ಈಶಪ್ಪ ಉಳ್ಳಾಗಡ್ಡಿ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.