ಗದಗ

ಅಡವಿಸೋಮಾಪುರ: ಶೌಚಾಲಯಗಳ ಕಾರ್ಯ ಪರಿಶೀಲನೆ

Published On :

ಗದಗ: ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಶೌಚಾಲಯಗಳನ್ನು ಸ್ಥಳೀಯ ಗ್ರಾಪಂ, ತಾಪಂ ಹಾಗೂ ಜಿಪಂ ಅಧಿಕಾರಿಗಳು ಜನಪ್ರತಿನಿದಿಗಳು ಮಂಗಳವಾರ ಪರಿಶೀಲಿಸಿದರು.
ನಿರ್ಮಲ ಭಾರತ ಅಭಿಯಾನ ಜಿಪಂ ಸಮಾಲೋಚಕ ಕೃಷ್ಣಾ ದೊಡ್ಡಮನಿ ಹಾಗೂ ಸುರೇಶ ಕಪ್ಪತ್ತನವರ ಮಾತನಾಡಿ, ಶೌಚಾಲಯಗಳ ನಿರ್ಮಾಣ ಕಾರ್ಯ ತೀವ್ರಗತಿಯಲ್ಲಿ ನಡೆದಿದ್ದು, ಉತ್ತಮ ಗುಣಮಟ್ಟದ ವಸ್ತುಗಳನ್ನು ಬಳಸುತ್ತಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಅತ್ಯಂತ ಕಾಳಜಿಯಂದ ಶೌಚಾಲಯ ನಿರ್ಮಾಣ ಕಾರ್ಯದಲ್ಲಿ ತಮ್ಮದೆಯಾದ ಸೇವೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಪಿಡಿಒ ಅಶ್ವಿನಿ ಕುರಡಗಿ ಮಾತನಾಡಿದರು. ತಾಪಂ ಸದಸ್ಯ ಪ್ರಹ್ಲಾದ ಹೊಸಳ್ಳಿ, ಗ್ರಾಪಂ ಅಧ್ಯಕ್ಷ ರಮೇಶ ಲಮಾಣಿ, ಸದಸ್ಯ ಮಲ್ಲಪ್ಪ ಹೊಸಳ್ಳಿ, ತುಕಾರಾಮ ಹುಲಗಣ್ಣವರ, ಮಹಾಂತೇಶ ದೊಡವಾಡ, ಹನುಮಂತ ಹೊಂಬಳ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.