ಗದಗ

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

Published On :

ಕನ್ನಡಪ್ರಭ ವಾರ್ತೆ, ಗದಗ, ಜ. 8
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ಮಾಡುವ ಕಾರ್ಯ ಪಾಲಕ ಮತ್ತು ಶಿಕ್ಷಕರಿಂದ ಆಗಬೇಕಿದೆ ಎಂದು ಗದಗ ಶಹರ ವಲಯದ ಶಿಕ್ಷಣ ಸಂಯೋಜಕ ಎ.ಬಿ. ಕಾಳೆ ಹೇಳಿದರು.
ಮಂಗಳವಾರ ಸ್ಥಳೀಯ ಎಸ್.ಎಂ. ಕೃಷ್ಣಾ ನಗರದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಗಂಡು ಮಕ್ಕಳ ಶಾಲೆ ನಂ. 5ರಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಉತ್ತಮ ಹಾಗೂ ಉನ್ನತ ಶಿಕ್ಷಣ ನೀಡಬೇಕು ಎಂದರು.
ಗದಗ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎನ್. ಬಳ್ಳಾರಿ ಮಾತನಾಡಿ, ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ನೀಡುವ ಮೂಲಕ ಉತ್ತಮ ಶಿಕ್ಷಣವನ್ನೂ ನೀಡಬೇಕು. ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವ ರೀತಿಯಲ್ಲಿ ಶಿಕ್ಷಣ ಒದಗಿಸಬೇಕು ಎಂದರು.
ರಾಜ್ಯ ಮುಸ್ಲಿಂ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಫರೀದ್ ಸುಂಕದ ಮಾತನಾಡಿ, ಈ ಶಾಲೆ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಈ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ವಿದ್ಯಾರ್ಥಿನಿಗೆ ಪ್ರತಿ ವರ್ಷ ಪ್ರೋತ್ಸಾಹಕ ಪಾರಿತೋಷಕವನ್ನು ನೀಡುವುದಾಗಿ ಭರವಸೆ ನೀಡಿದರು.
ರಾಜ್ಯ ಅಲ್ಪ ಸಂಖ್ಯಾತರ ಕ್ಷೇಮಾಭಿವೃದ್ಧಿ ಸಮಿತಿಯ ರಾಜ್ಯಾಧ್ಯಕ್ಷ ಖುರ್ಷಿದ್ ಡಾಲಾಯತ್ ಮಾತನಾಡಿ, ಈ ಭಾಗದಲ್ಲಿ ಕೇವಲ ಉರ್ದು ಪ್ರಾಥಮಿಕ ಶಾಲೆಯಿದ್ದು, ಉರ್ದು ಮಾಧ್ಯಮಿಕ ಶಾಲೆ ಇಲ್ಲದ ಕಾರಣ ವಿದ್ಯಾರ್ಥಿ, ವಿದ್ಯಾರ್ಥಿನಿಯರು ದೂರ ಹೋಗಿ ವಿದ್ಯಾಭ್ಯಾಸ ಮಾಡಲಾಗದೆ ತಮ್ಮ ಶಿಕ್ಷಣವನ್ನು ಮೊಟಕುಗೊಳಿಸುವಂತಹ ಸ್ಥಿತಿ ಇದೆ. ಕಾರಣ ಶಿಕ್ಷಣಾಧಿಕಾರಿ, ಜಿಲ್ಲಾಧಿಕಾರಿ, ಸಚಿವರು ಇತ್ತ ಗಮನಿಸಿ ಉರ್ದು ಮಾಧ್ಯಮಿಕ ಶಾಲೆ ಪ್ರಾರಂಭಕ್ಕೆ ಕ್ರಮ ಜರುಗಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಡಿ.ಎಚ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಎ.ಎನ್. ಶಾಲಗಾರ, ಫರೀದ್ ಸುಂಕದ ಹಾಗೂ ಎಸ್.ವೈ. ಪಠಾಣ ಅವರನ್ನು ಸನ್ಮಾನಿಸಲಾಯಿತು.
ನಗರಸಭೆ ಸದಸ್ಯೆ ಅಮೃತಾ ಪಾಟೀಲ, ಡಿ.ಎಸ್. ತಳವಾರ, ಎಸ್.ಎಸ್. ಉಣ್ಣಿಮಠ, ಸಿಆರ್‌ಪಿ ಸಲ್ಮಾ ಬೆಳಗಾಂವಾಲೆ, ನಿಸ್ಸಾರ್ ಅಹ್ಮದ್ ಖಾಜಿ, ಎನ್.ಕೆ. ಢಾಲಾಯತ್ ಸೇರಿದಂತೆ ಶಾಲೆಯ ಶಿಕ್ಷಕ-ಶಿಕ್ಷಕಿಯರು ಹಾಗೂ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.