ರೋಣ ಮಾದರಿ ಕ್ಷೇತ್ರವಾಗಿಸುವೆ
ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಜ. 8
ಚುನಾವಣೆಯಲ್ಲಿ ಕ್ಷೇತ್ರದ ಜನತೆಗೆ ನೀಡಿದ ಎಲ್ಲ ಭರವಸೆ ಈಡೇರಿಸುವುದರ ಜತೆಗೆ ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸಿ, ನೊಂದವರ ಧ್ವನಿಯಾಗಿ ಸೇವೆ ಸಲ್ಲಿಸಬೇಕೆಂಬ ನನ್ನ ಸಂಕಲ್ಪಕ್ಕೆ ಕ್ಷೇತ್ರದ ಜನತೆ ಸಹಕರಿಸಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಮನವಿ ಮಾಡಿದರು.
ಸಮೀಪದ ಕುಂಟೋಜಿ ಗ್ರಾಪಂ ವ್ಯಾಪ್ತಿಯ ಮ್ಯಾಕಲಝರಿ ಗ್ರಾಮದಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಬಳಿಕ ನಡೆದ ಸಮಾರಂಭದಲ್ಲಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ರಾಜ್ಯದ ಜನತೆಗೆ ಕೊಟ್ಟ ಭರವಸೆಯಂತೆ ಅನ್ನಭಾಗ್ಯ, ಕ್ಷೀರಭಾಗ್ಯ, ಸಣ್ಣ ರೈತರ ರು. 25 ಸಾವಿರ ವರೆಗಿನ ಸಾಲ, ನೇಕಾರ ಹಾಗೂ ಹಿಂದುಳಿದ ಸಮೂದಾಯಗಳ ಸಾಲ ಮನ್ನಾ ಮಾಡಿದೆ. ಹಾಲಿಗೆ ರು. 4 ಧನ ಸಹಾಯ, ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಭಾಗ್ಯ ಜ್ಯೋತಿ ಯೋಜನೆ ಬಾಕಿ ಹಣ ಮನ್ನಾ ಮಾಡುವ ಮೂಲಕ ರಾಜ್ಯದ ಜನರ ಪ್ರಶಂಸೆಗೆ ಪಾತ್ರವಾಗಿದೆ ಎಂದರು.
ಕ್ಷೇತ್ರದ ಜನತೆ ಯಾವ ಸಂಕೋಚವಿಲ್ಲದೇ ತಮ್ಮ ಸಮಸ್ಯೆಗಳನ್ನು ನನ್ನ ಗಮನಕ್ಕೆ ತನ್ನಿ ಸಂಬಂಧ ಪಟ್ಟ ಇಲಾಖಾಧಿಕಾರಿಗಳ ಜತೆಗೆ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಬಡತನ ರೇಖೆಗಿಂತ ಕೆಳಗಿನ ಬಡ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ಹಾಗೂ ಯಾಧವ ಸಮುದಾಯದ 60 ಕುಟುಂಬಗಳಿಗೆ ವಸತಿ ನಿರ್ಮಾಣದ ಹಕ್ಕುಪತ್ರ ವಿತರಿಸಿದರು.
ಕೆಸಿಸಿ ಬ್ಯಾಂಕ್ ಅಧ್ಯಕ್ಷ ಐ.ಎಸ್. ಪಾಟೀಲ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಅಶೋಕ ಬಾಗಮಾರ ಮಾತನಾಡಿದರು.
ಗಜೇಂದ್ರಗಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಸೊನ್ನದ, ಪುರಸಭೆ ವಿಪಕ್ಷ ನಾಯಕ ಶಿವರಾಜ ಘೋರ್ಪಡೆ, ವಿ.ಆರ್. ಗುಡಿಸಾಗರ, ತಾಪಂ ಸದಸ್ಯ ಅಂದಪ್ಪ ಬಿಚ್ಚೂರ, ಕುಂಟೋಜಿ ಗ್ರಾಪಂ ಅಧ್ಯಕ್ಷೆ ಶಾಂತವ್ವ ಮಾಳೋತ್ತರ, ಉಪಾಧ್ಯಕ್ಷೆ ಸುನಂದಾ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ಎನ್.ಕೆ. ಬೇವಿನಮರದ, ರೋಣ ಪಪಂ ಸದಸ್ಯ ಯುಸೂಫ್ ಇಟಗಿ, ಸದಸ್ಯ ಮುತ್ತಣ್ಣ ಕೊಪ್ಪಳ, ಪಾರವ್ವ ಕೌಡ್ಕಿ, ಅಂದಪ್ಪ ಅಂಗಡಿ, ಮುದಿಯಪ್ಪ ಕರಡಿ, ಕುಮಾರ ರಾಠೋಡ, ಬಸಣ್ಣ ಕರಡಿ, ಶರಣಪ್ಪ ಅವಾರಿ, ಮಲ್ಲಪ್ಪ ಅವಾರಿ, ಕಳಕಪ್ಪ ಬಂಡಿ, ಅರ್ಜುನ ರಾಠೋಡ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಎಸ್.ಎನ್. ಪಿಡಶೆಟ್ಟಿ, ಶ್ರೀಧರ ಗಂಜಿಗೌಡ್ರ, ತಾನಾಜಿರಾವ್ ಶಿಂಧೆ, ಮಾರುತಿ ಕಲ್ಲೋಡರ, ಎಫ್.ಎಸ್. ಕರಿದುಗನವರ, ಹಸನ ತಟಗಾರ, ಉಮೇಶ ರಾಠೋಡ್, ಮುರ್ತುಜಾ ಡಾಲಾಯತ, ಕೊಟ್ರೇಶ ಚಿಲಕಾ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

