ಗದಗ

ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

Published On :

ಶಿರಹಟ್ಟಿ: ಕೇಂದ್ರ ಯುಪಿಎ ಸರ್ಕಾರ ಗೃಹ ಬಳಕೆ ಸಿಲಿಂಡರ್ ದರ ಪದೇ ಪದೇ ಏರಿಕೆ ಮಾಡುತ್ತಿರುವುದರಿಂದ ಗ್ರಾಹಕರಿಗೆ ಹೊರೆಯಾಗುತ್ತಿದೆ. ಜನವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರ ಕೂಡಲೇ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಯಲ್ಲಪ್ಪ ಇಂಗಳಗಿ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಆರ್.ಬಿ. ನಿಂಗನಗೌಡ್ರಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ ಮಾತನಾಡಿ, ಕೇಂದ್ರ ಸರ್ಕಾರ ನಿರಂತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದರಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತದ ಗೌರವಕ್ಕೆ ಚ್ಯುತಿ ಬರುವಂತೆ ವರ್ತಿಸುತ್ತಿರುವ ಸರ್ಕಾರದ ಕ್ರಮ ಸರಿಯಲ್ಲ. ಈ ಧೋರಣೆ ಬದಲಿಸದಿದ್ದರೆ ಬರಲಿರುವ ಚುನಾವಣೆಯಲ್ಲಿ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ಪಪಂ ಸದಸ್ಯರಾದ ಗೂಳಪ್ಪ ಕರಿಗಾರ, ರೇಖಾ ಸುರೇಶ ಅಕ್ಕಿ, ರಾಮಣ್ಣ ಡಂಬಳ, ಜಾನು ಲಮಾಣಿ, ನಾಗರಾಜ ಕುಲಕರ್ಣಿ, ಶಶಿಧರ ರಾನಡೆ, ಸುರೇಶ ಅಕ್ಕಿ, ನಾಗರಾಜ ಇಂಗಳಗಿ, ಶಶಿಧರ ಮಣ್ಣೂರ, ರಮೇಶ ಚಿಕ್ಕತೋಟದ, ಈರಣ್ಣ ಕೋಟಿ, ಹನುಮಂತ ರಟ್ಟಿಹಳ್ಳಿ, ಮಂಜುನಾಥ ಸುಣಗಾರ, ಆನಂದ ಸೊರಟೂರ, ಗಂಗಾಧರ ಶೆಟ್ಟಿಕೇರಿ, ಸರೋಜ ಕಟ್ಟಿಮನಿ, ಅನ್ನಪೂರ್ಣಾ ಕಟ್ಟೇಕಾರ, ಕಲಾವತಿ ನಾವಿ, ನೀಲಮ್ಮ ನಾರ್ಶಿ, ಬಸವಣ್ಣೆವ್ವ ನಾಯ್ಕರ, ಬಸಮ್ಮ ಹಿರೇಮಠ, ಚನ್ನಮ್ಮ ಮೊರಬದ, ಶಕುಂತಲಾ ಬೆಂಗಳೂರ, ಶಾರದಾ ಬುವಾಜಿ, ಸಣ್ಣಮ್ಮ ಡಂಬಳ, ದ್ರಾಕ್ಷಾಯಿಣಿ ಬಂಕಾಪುರ, ರತ್ನವ್ವ ಕಾಳಗಿ, ಸೋಮವ್ವ ಬುಳ್ಳಣ್ಣವರ, ಫಕೀರೇಶ ವರವಿ, ರಾಜು ಛಬ್ಬಿ ಮತ್ತಿತರರು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಬಳಿಕ ತಹಸೀಲ್ದಾರ್ ಆರ್.ಬಿ. ನಿಂಗನಗೌಡ್ರ ಮಾತನಾಡಿ, ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಕಳುಹಿಸಿಕೊಡುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.