ಗದಗ

ಉತ್ತಮ ನಾಗರಿಕರ ನಿರ್ಮಾಣ ಜವಾಬ್ದಾರಿ ಶಿಕ್ಷಕರದ್ದು

Published On :

ಕನ್ನಡಪ್ರಭ ವಾರ್ತೆ, ಮುಂಡರಗಿ, ಜ. 9
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಹಂತ ಪ್ರತಿಯೊಂದು ಮಗುವಿಗೂ ಅತಿ ಮಹತ್ವದ ಮೈಲಿಗಲ್ಲಾಗಿದೆ. ವಿದ್ಯಾರ್ಥಿಗಳನ್ನು ನಾಡಿನ ಉತ್ತಮ ನಾಗರಿಕರನ್ನಾಗಿ ನಿರ್ಮಾಣ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹಮ್ಮಿಗಿ ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಹೇಳಿದರು.
ಅವರು ಗುರುವಾರ ಪಟ್ಟಣದ ಜಗದ್ಗುರು ತೋಂಟದಾರ್ಯ ಪ್ರೌಢಶಾಲಾ ಆವರಣದಲ್ಲಿ ಜಿಪಂ ಗದಗ, ತಾಪಂ ಮುಂಡರಗಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಸರ್ವಶಿಕ್ಷಣ ಅಭಿಯಾನ ಮುಂಡರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ಕಲಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಧ್ರುವಕುಮಾರ ಹೊಸಮನಿ ಮಾತನಾಡಿ, ಕಲಿಕೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪ್ರಥಮ, ದ್ವಿತೀಯ ಎಂದು ತಮ್ಮ ಸ್ಥಾನಕ್ಕಾಗಿ, ಬಹುಮಾನಕ್ಕಾಗಿ ಪಾಲ್ಗೊಳ್ಳುವುದಕ್ಕಿಂತ ತಮ್ಮಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರಹಾಕಲು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅವಶ್ಯವಾಗಿದೆ. ತಾಲೂಕಿನ ವಿದ್ಯಾರ್ಥಿಗಳು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಪಾಲ್ಗೊಂಡು ತಾಲೂಕಿನ ಕೀರ್ತಿಯನ್ನು ಹೆಚ್ಚಿಸುವಂತಾಗಲಿ ಎಂದರು. ಬಿಇಒ ಎಂ.ಎ. ರಡ್ಡೇರ, ಜೆ.ಟಿ. ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಿ.ಜಿ. ಹಿರೇಮಠ ಮಾತನಾಡಿದರು. ತಾಪಂ ಉಪಾಧ್ಯಕ್ಷೆ ಅಕ್ಕಮಹಾದೇವಿ ಹಾರೋಗೇರಿ ಅಧ್ಯಕ್ಷತೆ ವಹಿಸಿದ್ದರು. ಎಂ.ಎಫ್. ಡಾಲಾಯತ್, ಎಂ.ಡಿ. ಭಾವಿಮನಿ, ಜೆ.ಎನ್. ಕಮ್ಮಾರ, ಎಂ.ಎನ್. ಕುಕನೂರ, ಡಿ.ಎಸ್. ಲಮಾಣಿ, ಎಂ.ಕೆ. ತಳಗಡೆ, ಎಚ್.ಡಿ. ಪೂಜಾರ ಇದ್ದರು. ಹಿರೇಮಠ ಸ್ವಾಗತಿಸಿ, ಎನ್.ಎಂ. ಬಡಿಗೇರಿ ನಿರೂಪಿಸಿ, ಎಂ.ಡಿ. ಭಾವಿಮನಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.