ಗದಗ

ಸಂಸದ ಉದಾಸಿ ರಸ್ತೆ ಕಾಮಗಾರಿ ವೀಕ್ಷಣೆ

Published On :

ಲಕ್ಷ್ಮೇಶ್ವರ: ಸಮೀಪದ ಗುಲಜಂಜಿಕೊಪ್ಪ ಮತ್ತು ಮುಕ್ತಿಮಂದಿರ ಧರ್ಮಕ್ಷೇತ್ರದಿಂದ ಹಾಯ್ದು ಲಕ್ಷ್ಮೇಶ್ವರವನ್ನು ಕೂಡುವ 5 ಕಿಮೀ ರಸ್ತೆ ಕಾಮಗಾರಿಯನ್ನು ಸಂಸದ ಶಿವಕುಮಾರ ಉದಾಸಿ ಮಂಗಳವಾರ ಸಂಜೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಧಾರ್ಮಿಕ ಕ್ಷೇತ್ರಗಳು ಬೆಳೆಯಲು ಉತ್ತಮ ಸಾರಿಗೆ ಸಂಪರ್ಕಗಳು ಅವಶ್ಯವಾಗಿವೆ. ಅದಕ್ಕಾಗಿ ಧರ್ಮಕ್ಷೇತ್ರಗಳಿಗೆ ಜನರು ಹೋಗಿಬರಲು ಅನುಕೂಲವಾಗಬೇಕು ಎನ್ನುವ ನಿಟ್ಟಿನಲ್ಲಿ ಮುಕ್ತಿಮಂದಿರ ಧರ್ಮಕ್ಷೇತ್ರದ ರಸ್ತೆಯನ್ನು ಸುಧಾರಣೆ ಮಾಡಲಾಗಿದೆ. ಇದರಿಂದ ಜನರಲ್ಲಿ ಧಾರ್ಮಿಕ ಭಾವನೆಗಳು ಬೆಳೆಯಲು ಸಾಧ್ಯವಾಗುತ್ತದೆ ಎಂದರು. ಲಕ್ಷ್ಮೇಶ್ವರ ಸ್ಪಿನ್ನಿಂಗ್ ಮಿಲ್ಲಿನಿಂದ ಮುಕ್ತಿಮಂದಿರದ ಮಹಾದ್ವಾರದ ವರೆಗಿನ 2 ಕಿ. ಮೀ. ರಸ್ತೆಯನ್ನು ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಹಾಗೂ ರಾಮಗೇರಿ ಗ್ರಾಪಂ ಸದಸ್ಯ ಚಂದ್ರು ತಳವಾರ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.