ಗದಗ ರೇಲ್ವೆ ನಿಲ್ದಾಣದಲ್ಲಿ ಮೂಲಸೌಲಭ್ಯಕ್ಕೆ ಕ್ರಮ
ಗದಗ: ಗದಗ ರೇಲ್ವೆ ನಿಲ್ದಾಣವು ಬಿ ದರ್ಜೆಗೆ ಸೇರಿದ್ದು, ಆದರೆ, ಇಲ್ಲಿ ಬಿ ದರ್ಜೆಗೆ ಬೇಕಾದ ಮೂಲಭೂತ ಸೌಲಭ್ಯಗಳು ದೊರೆಯದೇ ಹಲವು ರೀತಿಯ ತೊಂದರೆಗಳನ್ನು ಇಲ್ಲಿನ ರೇಲ್ವೆ ನಿಲ್ದಾಣ ಎದುರಿಸುತ್ತಿದ್ದು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಮೂಲಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಭಾರತೀಯ ರೇಲ್ವೆ ಇಲಾಖೆ ಪ್ರಯಾಣಿಕರ ಸೌಲಭ್ಯ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಹೇಳಿದರು.
ಗುರುವಾರ ನಗರದ ರೇಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿರುವ ಮೂಲಭೂತ ಸಮಸ್ಯೆಗಳ ಕುರಿತು ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚಿಸಿ ನಂತರ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಗದಗ ರೇಲ್ವೆ ನಿಲ್ದಾಣವು ಬಿ ದರ್ಜೆಗೆ ಸೇರಿದ್ದು, ಆದರೆ, ಇಲ್ಲಿ ಬಿ ದರ್ಜೆಗೆ ದೊರೆಯಬೇಕಾದ ಸೌಲಭ್ಯಗಳು ದೊರೆಯದೇ ಹಲವು ರೀತಿಯ ತೊಂದರೆ ಅನುಭವಿಸುವಂತಾಗಿದ್ದರೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಈ ಕುರಿತು ಇಲ್ಲಿನ ಪ್ರಯಾಣಿಕರ ಹಾಗೂ ಸಿಬ್ಬಂದಿಯೊಂದಿಗೆ ಚರ್ಚಿಸಲಾಗಿದ್ದು, ಇಲ್ಲಿನ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಗದಗ ರೇಲ್ವೆ ನಿಲ್ದಾಣದಲ್ಲಿನ ಮೂಲಸೌಲಭ್ಯಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.
ಪ್ರತ್ಯೇಕ ಕೌಂಟರ್ಗೆ ಸೂಚನೆ: ಹಲವು ವರ್ಷಗಳಿಂದ ಗದಗ ರೇಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಟಿಕೆಟ್ ತಗೆದುಕೊಳ್ಳಲು ಕೇವಲ 2 ಕೌಂಟರ್ಗಳಿರುವ ಹಿನ್ನೆಲೆಯಲ್ಲಿ ಟಿಕೆಟ್ ಖರೀದಿಸಲು ತೀವ್ರ ತೊಂದರೆಯಾಗುತ್ತಿದ್ದು, ಈ ಕುರಿತು ಗಮನಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಗದಗ ರೇಲ್ವೆ ನಿಲ್ದಾಣದಲ್ಲಿ ಮತ್ತೊಂದು ಕೌಂಟರ್ ತೆರೆಯಲು ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದರು.
ಈ ಸಂದರ್ಭ ರೇಲ್ವೆ ಅಭಿವೃದ್ಧಿ ಹೋರಾಟ ವೇದಿಕೆ, ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ರೇಲ್ವೆ ನಿಲ್ದಾಣದಲ್ಲಿರುವ ಮೂಲಭೂತ ಸಮಸ್ಯೆಗಳ ಕುರಿತು ಭಾರತೀಯ ರೇಲ್ವೆ ಇಲಾಖೆ ಪ್ರಯಾಣಿಕರ ಸೌಲಭ್ಯ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಜಯ ಮುಳಗುಂದ, ಉಮರ ಫಾರೂಖ್ ಹುಬ್ಬಳ್ಳಿ, ಬಸವಣ್ಣಯ್ಯ ಹಿರೇಮಠ, ನಿಸ್ಸಾರ್ ಅಹ್ಮದ್ ಖಾಜಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

