ಗದಗ

ಸುದ್ದಿ ಸಂಕ್ಷೇಪ

Published On :

ಇಂದು ಶಿಬಿರ ಉದ್ಘಾಟನೆ
ಗದಗ: ಜ. ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಅಡಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ದತ್ತುಗ್ರಾಮ ಹರ್ಲಾಪುರದಲ್ಲಿ ಜ. 10ರ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಹರ್ಲಾಪುರದ ತೋಂಟದಾರ್ಯ ಮಠದ ಚಂದ್ರಶೇಖರ ದೇವರು ಸಾನ್ನಿಧ್ಯ ವಹಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಪ್ರೇಮನಾಥ ಗರಗ ಉದ್ಘಾಟಿಸುವರು. ಹರ್ಲಾಪುರ ಗ್ರಾಪಂ ಸದಸ್ಯೆ ಹನಮವ್ವ ಚಟ್ರಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿಯ ಉಪಾಧ್ಯಕ್ಷ ಈಶಣ್ಣ ಮೇರವಾಡೆ, ಹರ್ಲಾಪುರ ಗ್ರಾಪಂ ಅಧ್ಯಕ್ಷೆ ಹಾಲವ್ವ ಸತ್ಯನಗೌಡ್ರ, ಸದಸ್ಯ ಶಿವಾನಂದಪ್ಪ ಯಾಳವಾಡ, ಜೆ.ಬಿ. ಗುಡಗೂರ, ಕಾಲೇಜಿನ ಪ್ರಾಚಾರ್ಯ ಬಿ.ಬಿ. ಗೌಡರ ಉಪಸ್ಥಿತರಿರುವರು ಎಂದು ಸಹಶಿಬಿರಾಧಿಕಾರಿ ವೈ.ಎಸ್. ಮತ್ತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಜಾಗೃತಿ ಕಾರ್ಯಕ್ರಮ
ಗದಗ: ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಧಾರವಾಡ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಸಂಯುಕ್ತವಾಗಿ ಜ. 10ರ ಸಂಜೆ 4 ಗಂಟೆಗೆ ರಪ್ತು ಜಾಗೃತಿ ಕಾರ್ಯಕ್ರಮವನ್ನು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರಮರಿ ಉದ್ಘಾಟಿಸುವರು. ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಎಲ್.ಸಿ. ಲಿಂಬಯ್ಯಸ್ವಾಮಿಮಠ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಐ. ಕುಂಬಾರ, ಧಾರವಾಡದ ವಿಶ್ವೇಶ್ವರಯ್ಯ ವ್ಯಾಪಾರ ಮತ್ತು ಉತ್ತೇಜನ ಕೇಂದ್ರದ ಜಂಟಿ ನಿರ್ದೇಶಕ ಡಾ. ವೀರಣ್ಣ ಎಸ್.ಎಚ್. ಆಗಮಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ಯುವಜನ ಮೇಳ
ರೋಣ: ಜಿಪಂ ಗದಗ, ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಗದಗ, ತಾಪಂ ರೋಣ, ಪುರಸಭೆ, ಆಝಾದ ಯುವಕ ಸಂಘ ಆಶ್ರಯದಲ್ಲಿ ರೋಣ ತಾಲೂಕು ಮಟ್ಟದ ಯುವಜನ ಮೇಳ ಜ. 10ರಂದು ಸಂಜೆ 6ಕ್ಕೆ ಪಟ್ಟಣದ ಹೊಸ ಸಂತೆ ಬಜಾರ ಜಾಗೆಯಲ್ಲಿ ಜರುಗಲಿದೆ. ಶಾಸಕ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು. ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳದ ಉದ್ಘಾಟಿಸುವರು. ತಾಪಂ ಅಧ್ಯಕ್ಷೆ ತಿಪ್ಪವ್ವ ದೊಡ್ಡಮನಿ ಕ್ರೀಡಾಜ್ಯೋತಿ ಉದ್ಘಾಟಿಸುವರು. ಆಝಾದ ಯುವಕ ಸಂಘದ ಉಪಾಧ್ಯಕ್ಷ ಭಾವಾಸಾಬ ಬೇಟಗೇರಿ, ಗೌರವಾಧ್ಯಕ್ಷ ಮಿಥುನ್ ಪಾಟೀಲ, ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ಜಿಪಂ ಸದಸ್ಯ ಡಾ. ಆರ್.ಬಿ. ಬಸವರಡ್ಡೇರ, ಶಾರದಾ ಹಿರೇಗೌಡ್ರ, ಶಕುಂತಲಾ ಗಾಣಿಗೇರ, ತಾಪಂ ಉಪಾಧ್ಯಕ್ಷೆ ಶೈಲಜಾ ಯರಗೇರಿ, ಪುರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಗಡಗಿ, ಸಿ.ಕೆ. ಸುಂಕದ ಪಾಲ್ಗೊಳ್ಳುವರು.
ಇಂದು ವಾರ್ಷಿಕೋತ್ಸವ
ಶಿರಹಟ್ಟಿ: ಪಟ್ಟಣದ ಸಿ.ಸಿ. ನೂರಶೆಟ್ಟರ್ ವಿದ್ಯಾ ಪ್ರಸಾರ ಸಂಸ್ಥೆಯ ಫಕೀರ ಚನ್ನವೀರೇಶ್ವರ ಪ್ರಾಥಮಿಕ ಹಾಗೂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 11ನೇ ವಾರ್ಷಿಕೋತ್ಸವ ಜ. 10ರಂದು ಶಾಲೆ ಆವರಣದ ಚನ್ನಬಸಮ್ಮ ವೇದಿಕೆಯಲ್ಲಿ ನಡೆಯಲಿದೆ.
ಅಂದು ಮಧ್ಯಾಹ್ನ 1ಕ್ಕೆ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಬೀಳ್ಕೊಡುವ ಕಾರ್ಯಕ್ರಮ ಜರುಗಲಿದ್ದು, ಜ. ಫಕೀರ ಸಿದ್ದರಾಮ ಶ್ರೀಗಳು ಸಾನ್ನಿದ್ಯ ವಹಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಚಂದ್ರಕಾಂತ ನೂರಶೆಟ್ಟರ್ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಎಸ್.ವಿ. ಸಂಕನೂರ, ತಹಸೀಲ್ದಾರ್ ಆರ್.ಬಿ. ನಿಂಗನಗೌಡರ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಅತಿಥಿಗಳಾಗಿ ಆಗಮಿಸಲಿದ್ದಾರೆ.
11ರಂದು 4 ಗಂಟೆಗೆ ಸನ್ಮಾನ ಹಾಗೂ ಮಕ್ಕಳ ಸಾಂಸ್ಕೃತಿಕ ಸಮಾರಂಭ ಜರುಗಲಿದ್ದು, ಸಂಸ್ಥೆ ಅಧ್ಯಕ್ಷ ಚಂದ್ರಕಾಂತ ನೂರಶೆಟ್ಟರ್ ಅಧ್ಯಕ್ಷೆ ವಹಿಸಲಿದ್ದಾರೆ. ಶಾಸಕ ರಾಮಕೃಷ್ಣ ದೊಡ್ಡಮನಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ ಲಕ್ಕುಂಡಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇಂದು ಕಲಾಸ್ಪರ್ಧೆ
ಗದಗ: ಮಕ್ಕಳಲ್ಲಿ ಹಾಗೂ ಯುವಕರಲ್ಲಿ ಕಲಾಸಕ್ತಿ ಬೆಳೆಸುವ ಉದ್ದೇಶದಿಂದ ಸ್ಥಳೀಯ ರಾಜೀವ ಗಾಂಧಿ ನಗರದಲ್ಲಿರುವ ವಿಜಯ ಕಲಾಮಂದಿರ ಸಂಸ್ಥೆಯ ಪ್ರೌಢಶಾಲೆಯಲ್ಲಿ ಜ. 10ರ ಬೆಳಗ್ಗೆ 10 ಗಂಟೆಗೆ ಸಂಸ್ಥೆಯ ವಿದ್ಯಾರ್ಥಿಗಳಿಗಾಗಿ ಕಲಾಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಪ್ರತಿಷ್ಠಾಪನಾ ಕಲೆಗಳಲ್ಲಿ ಭಾರತೀಯ ಸಂಸ್ಕೃತಿ, ದುಶ್ಚಟಗಳನ್ನು ತ್ಯಜಿಸಿ, ಭಯೋತ್ಪಾದನೆ ಪರಿಣಾಮ, ಪರಿಸರ ಮಾಲಿನ್ಯ, ಮೂಢನಂಬಿಕೆ ಹೀಗೆ ಹಲವಾರು ಸಾಮಾಜಿಕ ಚಿಂತನೆಗಳನ್ನೊಳಗೊಂಡ ಪ್ರತಿಷ್ಠಾಪನಾ ಕಲೆಗಳು ಅನಾವರಣಗೊಳ್ಳಲಿವೆ. ಕಾರಣ ನಗರದ ಕಲಾವಿದರು, ಕಲಾಭಿಮಾನಿಗಳು, ಕಲಾಸಕ್ತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.