ಆಸ್ಪತ್ರೆ ಪುನರಾರಂಭಿಸಲು ಆಗ್ರಹ
ಕನ್ನಡಪ್ರಭ ವಾರ್ತೆ, ಗದಗ, ಜ. 10
ಗದಗ-ಬೆಟಗೇರಿ ಅವಳಿ ನಗರದ ಸಾರ್ವಜನಿಕ ಆಸ್ಪತ್ರೆಯನ್ನು ಪುನಃ ಸುಸಜ್ಜಿತವಾಗಿ ಆರಂಭಿಸಲು ಜೈ ಭೀಮ ಸೇನಾ ರಾಜ್ಯ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದಿಂದ ಈಚೆಗೆ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಗದಗ ಜಿಲ್ಲಾ ಆಸ್ಪತ್ರೆಯನ್ನು ಗದಗ ಹೊರ ವಲಯದಲ್ಲಿ ಈಗಾಗಲೇ ನೂತನ ಕಟ್ಟಡಕ್ಕೆ ವರ್ಗಾವಣೆ ಮಾಡಿದ್ದು, ಅವಳಿ ನಗರದ ಬಡ ಜನತೆಗೆ ಅವಳಿ ನಗರದ ವ್ಯಾಪ್ತಿಯಲ್ಲಿ ಸುಸಜ್ಜಿತ ಆಸ್ಪತ್ರೆಗಳು ಇಲ್ಲದೇ ಜನ ಸಾಮಾನ್ಯರು ಜಿಲ್ಲಾ ಆಸ್ಪತ್ರೆಗೆ ಹೋಗಿ ತಮ್ಮ ರೋಗಿಗಳನ್ನು ತಪಾಸಣೆಗೊಳಿಸುವುದು ತುಂಬಾ ತೊಂದರೆ ಕಾರ್ಯವಾಗಿದೆ.
ಅಲ್ಲದೇ ಜಿಲ್ಲಾ ಆಸ್ಪತ್ರೆಯಲ್ಲಿ ಕೂಡ ಸರಿಯಾದ ವ್ಯವಸ್ಥೆಗಳಿಲ್ಲ. ಜಿಲ್ಲಾಸ್ಪತ್ರೆ ಗದಗ-ಬೆಟಗೇರಿ ಅವಳಿನಗರದಿಂದ ಬಹು ದೂರವಿದ್ದು, ಇದರಿಂದ ರೋಗಿಗಳು ಜಿಲ್ಲಾ ಆಸ್ಪತ್ರೆಗೆ ಹೋಗುವುದು ತುಂಬಾ ಕಷ್ಟಕರವಾಗುತ್ತಿದೆ.
ಕಾರಣ ಗದಗ-ಬೆಟಗೇರಿ ಅವಳಿನಗರದ ಜನತೆಗೆ ಅನುಕೂಲಕರವಾಗುವ ರೀತಿಯಲ್ಲಿ ಈ ಹಿಂದೆ ಇದ್ದ ಸಾರ್ವಜನಿಕ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯನ್ನಾಗಿ ಮಾರ್ಪಡಿಸಿ ಆಸ್ಪತ್ರೆಗೆ ಇರಬೇಕಾದ ಎಲ್ಲ ಸೌಲಭ್ಯಗಳನ್ನು ಅಳವಡಿಸಿಕೊಂಡು ಪುನಃ ಪ್ರಾರಂಭಿಸಿಬೇಕು. ಇಲ್ಲದಿದ್ದಲ್ಲಿ ಸಂಘಟನೆಯಿಂದ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಸಂಘಟನೆ ಅಧ್ಯಕ್ಷ ಗಣೇಶ ಹುಬ್ಬಳ್ಳಿ, ಕಾರ್ಯದರ್ಶಿ ರಾಘವೇಂದ್ರ ಪರಾಪುರ, ಉಪಾಧ್ಯಕ್ಷ ಮಂಜುನಾಥ ತೌಜಲ, ರಾಜ್ಯ ಕಾರ್ಯದರ್ಶಿ ಅಶೋಕ ಹಾದಿಮನಿ, ವಿಜಯ ಕಲ್ಮನಿ, ದೀಪಕ ಕಲ್ಮನಿ, ಪರಶುರಾಮ ಸಂಗಾಪುರ, ಓಬಳೇಶ ಯಶವಂತಪುರ, ವಿಜಯ ತಳಗೇರಿ, ಮಂಜುನಾಥ ಪರಾಪುರ, ಶ್ರೀಕಾಂತ ಪಿರೂರ, ಹೇಮಂತ ಹುಬ್ಬಳ್ಳಿ, ಮುತ್ತು ಭರಮಗೌಡ್ರ, ಪರಶುರಾಮ ಸೀತಿಮನಿ, ಎ. ವಿಜಯಕುಮಾರ, ಬಸವರಾಜ ಬದಾಮಿ, ಪ್ರೇಮ ಹುಬ್ಬಳ್ಳಿ, ಶಂಕರ ಹುಬ್ಬಳ್ಳಿ, ಉಡಚಪ್ಪ ಹಳ್ಳಿಕೇರಿ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

