12ರಿಂದ ಆಮ್ ಆದ್ಮಿ ಸದಸ್ಯತ್ವ ಅಭಿಯಾನ
ಗದಗ ನ. 12ರ ಭಾನುವಾರದಿಂದ ಆಮ್ ಆದ್ಮಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಆಮ್ ಆದ್ಮಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸ್ವಯಂ ಪ್ರೇರಣೆಯಿಂದ ಬರುವವರಿಗೆ ಮುಕ್ತ ಅವಕಾಶವಿದ್ದು, ನ. 12ರ ಭಾನುವಾರ ನಗರದ ಐಎಂಎ ಹಾಲ್ನಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಸದಸ್ಯತ್ವ ನೋಂದಣಿ ಹಮ್ಮಿಕೊಳ್ಳಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ವಿಜಯ ಕಲಕೇರಿ ಹೇಳಿದರು. ಶುಕ್ರವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು.
ದೇಶದಲ್ಲಿನ ಭ್ರಷ್ಟಾಚಾರ ನಿರ್ಮೂಲನೆಗೆ ಆಮ್ ಆದ್ಮಿ ಸನ್ನದ್ಧವಾಗಿದ್ದು, ಈಚೆಗೆ ದೆಹಲಿಯಲ್ಲಿ ಜರುಗಿದ ಚುನಾವಣೆಯಲ್ಲಿ ಒಬ್ಬ ಮಾಮೂಲು ಪ್ರಜೆ ದೆಹಲಿಯ ಮುಖ್ಯಮಂತ್ರಿಯನ್ನಾಗಿ ಮಾಡಿತು.
ಅದೇ ರೀತಿ ರಾಜ್ಯದಲ್ಲಿಯೂ ಸಹ ಬದಲಾವಣೆಯ ಗಾಳಿಯು ಬೀಸಲಿದ್ದು, ರಾಜ್ಯದಲ್ಲಿರುವ ಎಲ್ಲ ಭ್ರಷ್ಟಾಚಾರಿಗಳನ್ನು ತೊಲಗಿಸಿ ಉತ್ತಮ ಪ್ರಜೆಯನ್ನು ಆಯ್ಕೆ ಮಾಡುವ ಜವಾಬ್ದಾರಿ ಈ ರಾಜ್ಯದ ಪ್ರಜೆಯ ಮೇಲಿದೆ.
ಈಗಾಗಲೇ ಆಡಳಿತ ನಡೆಸಿದ, ನಡೆಸುತ್ತಿರುವ ಸರ್ಕಾರಗಳು ಹಲವು ರೀತಿಯ ಹಗರಣಗಳನ್ನು ಎಸಗಿ ದೇಶದ ಬೊಕ್ಕಸವನ್ನು ಲೂಟಿ ಮಾಡಿದ್ದಾರೆ. ಶ್ರೀ ಸಾಮಾನ್ಯನಿಗೆ ದೊರೆಯಬೇಕಿದ್ದ ಮೂಲಭೂತ ಸಮಸ್ಯೆಗಳನ್ನು ಈಡೇರಿಸುವಲ್ಲಿ ಈಗಿನ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ದೂರಿದರು.
ಅಧಿಕಾರಿಗಳ ಮೇಲೆ ಸರ್ಕಾರಕ್ಕೆ ಹಿಡಿತವಿಲ್ಲದಂತಾಗಿದೆ. ಇದರಿಂದಾಗಿ ದಿನನಿತ್ಯ ಎಗ್ಗಿಲ್ಲದೆ ಭ್ರಷ್ಟಾಚಾರ ನಡೆಯುತ್ತಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಆಮ್ ಪಾರ್ಟಿ ಸನ್ನದ್ಧವಾಗಿದೆ. ಅದೇ ರೀತಿ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸಂಘಟಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿ ಗದಗ ಜಿಲ್ಲಾ ಘಟಕ ಉದ್ಘಾಟನೆ, ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕವನ್ನು ಬಲಪಡಿಸಿ ಬರುವ ಲೋಕಸಭೆ ಚುನಾವಣೆಗೆ ಒಬ್ಬ ಶ್ರೇಷ್ಟ ಹಾಗೂ ಪ್ರಾಮಾಣಿಕ ಸದಸ್ಯನನ್ನು ಆರಿಸಿತರುವುದು. ಪಾರ್ಟಿಗೆ ಜನಸಾಮಾನ್ಯರು ನೀಡುವ ದೇಣಿಗೆಯಿಂದ ಪ್ರಾಮಾಣಿಕವಾಗಿ ಸ್ಪರ್ಧಿಸಲಾಗುವುದು. ಕಾರಣ ಆಮ್ ಆದ್ಮಿ ಪಾರ್ಟಿಗೆ ಸೇರಲು ಇಚ್ಛಿಸುವವರು 9902788557, 9480940849ಗೆ ಸಂಪರ್ಕಿಸಬಹುದಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಿಶ್ವನಾಥ ಸಿರಿ, ವರದರಾಜ ಪತ್ತೇಪುರ, ಸೈಯದ್ ಖಾಲಿದ್ ಕೊಪ್ಪಳ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

