ಗದಗ

ಕಲಿಕೋತ್ಸವದಿಂದ ಮಕ್ಕಳ ಪ್ರಗತಿ ತಿಳಿಯಲು ಸಾಧ್ಯ

Published On :

ಲಕ್ಷ್ಮೇಶ್ವರ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಕಲಿಕೋತ್ಸವ ಸಹಕಾರಿಯಾಗಿದೆ ಎಂದು ಜಿಪಂನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ ಅಭಿಪ್ರಾಯ ಪಟ್ಟರು.
ಶನಿವಾರ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆ ನಂ. 4ರಲ್ಲಿ ಜರುಗಿದ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಮಕ್ಕಳ ಕಲಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಯ ಶಿಕ್ಷಕರು ಮಕ್ಕಳಿಗೆ ಸರಿಯಾಗಿ ಪಾಠ ಮಾಡುವುದಿಲ್ಲ ಎನ್ನುವ ಮನೋಭಾವನೆ ಪಾಲಕರಲ್ಲಿದೆ. ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿ ಇರುವ ಕೀಳರಿಮೆಯನ್ನು ತೊಡೆದು ಹಾಕಿ ಮಕ್ಕಳಿಗೆ ಉತ್ತಮವಾಗಿ ಪಾಠ ಮಾಡುವ ಮೂಲಕ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲವೆಂಬುದನ್ನು ತೋರಿಸಿಕೊಡುವ ಕಾರ್ಯವನ್ನು ಸರ್ಕಾರಿ ಶಾಲೆಗಳ ಶಿಕ್ಷಕರು ಮಾಡಬೇಕಾಗಿದೆ ಎಂದರು.
ಪುರಸಭೆ ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಿಮಠ, ಶಿರಹಟ್ಟಿ ತಾಪಂ ಅಧ್ಯಕ್ಷೆ ಸುನಂದಮ್ಮ ಬಿದರಳ್ಳಿ, ಕೆ.ಡಿ. ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಬುರುಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಪಂ ಉಪಾಧ್ಯಕ್ಷೆ ಶಾರದಾ ಕವಲೂರ, ಪುರಸಭೆ ಉಪಾಧ್ಯಕ್ಷ ಎಂ.ಆರ್. ಪಾಟೀಲ, ಜಿಪಂನ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ನಿರ್ಮಲಾ ಬರದೂರ, ಬಿ.ಎಸ್. ಈಳಗೇರ, ಜಿಲ್ಲಾ ಉಪಾಧ್ಯಕ್ಷ ಬಿ.ಎಸ್. ಹರ್ಲಾಪುರ, ಎಸ್.ವಿ. ಅಂಗಡಿ, ಕಸಾಪ ಅಧ್ಯಕ್ಷ ಕೆ.ಎ.ಬಳಿಗೇರ, ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಕೋರದಾಳ ಮುಂತಾದವರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಜೆ.ಬಿ. ಗುಡಿ ಸ್ವಾಗತಿಸಿದರು. ಶಿಕ್ಷಕ ಈಶ್ವರ ಮೇಡ್ಲೇರಿ ನಿರೂಪಿಸಿದರು. ಪ್ರಭಾರಿ ಮುಖ್ಯಾಧ್ಯಾಪಕಿ ಡಿ.ಎಫ್. ಪಾಟೀಲ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.