ಗದಗ

ವಿದ್ಯಾರ್ಥಿಗಳು ಜವಾಬ್ದಾರಿ ಅರಿತು ನಡೆಯಿರಿ

Published On :

ಕನ್ನಡಪ್ರಭ ವಾರ್ತೆ, ನರಗುಂದ, ಜ. 12
ಆಧುನಿಕತೆಯ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಟಿವಿ ಹಾಗೂ ವಿವಿಧ ಮಾಧ್ಯಮಗಳ ಪ್ರಭಾವದಿಂದ ತಮ್ಮ ಜವಾಬ್ದಾರಿಯನ್ನು ಮರೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಎಲ್ಲರೂ ಶ್ರಮಿಬೇಕು ಎಂದು ಧಾರವಾಡದ ನಿವೃತ್ತ ಪ್ರಾಚಾರ್ಯ ಡಾ. ಆರ್.ಬಿ. ಚಿಲಮಿ ಕರೆ ನೀಡಿದರು.
ಅವರು ಪಟ್ಟಣದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದರು.
ಮಕ್ಕಳಲ್ಲಿ ಜನಪದ ಸಾಹಿತ್ಯದ ಬಗ್ಗೆ, ಸಂಸ್ಕಾರ ಹಾಗೂ ಸಂಸ್ಕೃತಿ ಬೆಳೆಸುವ ಮೂಲಕ ಆದರ್ಶ ವಿದ್ಯಾರ್ಥಿಗಳನ್ನಾಗಿ ರೂಪಿಸುವಂತೆ ಮಕ್ಕಳಲ್ಲಿ ವಿವಿಧ ಭಾಷೆಗಳನ್ನು ಕಲಿಸುವ ಮೂಲಕ ಅವರಲ್ಲಿ ಮಾತೃಭಾಷೆಯ ಬಗ್ಗೆ ಅಭಿಮಾನ ಮೂಡಿಸಬೇಕು ಎಂದರು. ವಿದ್ಯಾರ್ಥಿಗಳ ಕಿರು ಹೊತ್ತಿಗೆ ಲೈನ್ಸ್ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ಸಚಿವ ಸಿ.ಸಿ. ಪಾಟೀಲ, ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಬೇಕಾಗಿದೆ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ಜವಾಬ್ದಾರಿ ಎಲ್ಲ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಚೇರ್‌ಮನ್ ಬಿ.ಕೆ. ಗುಜಮಾಗಡಿ ಮಾತನಾಡಿ, ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆ ಕ್ರೀಯಾಶೀಲವಾಗಿದ್ದು, ಬರುವ ದಿನಗಳಲ್ಲಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ನರ್ಸರಿ ಶಿಕ್ಷಣವನ್ನು ಆರಂಭಿಸಲಾಗುವುದು ಎಂದರು. ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಸ್.ಎಸ್. ಪಾಟೀಲ, ಜಂಟಿ ಕಾರ್ಯದರ್ಶಿ ಸಿ.ಎಸ್. ಸಾಲೂಟಗಿಮಠ, ಶಿಕ್ಷಕ ಜಿ.ಬಿ. ಹಿರೇಮಠ, ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಮುಗಳಿ, ಸೊಸೈಟಿ ಅಧ್ಯಕ್ಷ ಕೆ.ಬಿ. ಹಸಬಿ, ಜಿ.ಬಿ. ಕುಲಕರ್ಣಿ, ವಿ.ಆರ್. ಗಡಾದ, ಜಿ.ಎನ್. ಸಾಲಿ, ಜೆ.ವಿ. ಕಂಠಿ, ಪ್ರಕಾಶ ಸವಳಕರ ಮುಂತಾದವರು ಉಪಸ್ಥಿತರಿದ್ದರು. ಎಸ್.ವೈ. ಬಡಿಗೇರ ಸ್ವಾಗತಿಸಿದರು. ಸುಜಯ ಮುಧೋಳೆ, ಬಸವರಾಜ ಬದ್ನಿಕಾಯಿ ನಿರೂಪಿಸಿದರು. ವಿಜಯಗೌಡ ಯಲ್ಲಪ್ಪಗೌಡ್ರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.