ವಿವೇಕಾನಂದರಿಂದ ಜಾಗೃತಿ
ಕನ್ನಡಪ್ರಭ ವಾರ್ತೆ, ಗದಗ, ಜ. 12
ಸ್ವಾಮಿ ವಿವೇಕಾನಂದರು ಯುವಕರಿಗೆ ಸ್ಫೂರ್ತಿ ಸೆಲೆ ನೀಡುವುದರೊಂದಿಗೆ ರಾಷ್ಟ್ರದಲ್ಲಿ ಜಾಗೃತಿ ಉಂಟು ಮಾಡಿದರು ಎಂದು ಗಣೇಶಸಿಂಗ್ ಬ್ಯಾಳಿ ಹೇಳಿದರು.
ಅವರು ಭಾನುವಾರ ಬೆಟಗೇರಿಯ ಮಹಾರಾಣಾ ಪ್ರತಾಪಸಿಂಹ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬರಲ್ಲೂ ಭಗವಂತನ ಶಕ್ತಿಯಿದೆ. ಬಡವರಲ್ಲಿಯೂ ಭಗವಂತ ನಿಮ್ಮ ಸೇವೆಯನ್ನು ಅಪೇಕ್ಷಿಸುತ್ತಿದ್ದಾನೆ. ಈ ಸಂದೇಶದಿಂದ ಯುವಜನರ ಹೃದಯ ಸ್ಫೂರ್ತಿಗೊಳ್ಳುವಂತಾಗಿದೆ ಎಂದರು. ಅಧ್ಯಕ್ಷತೆಯನ್ನು ಉಪನ್ಯಾಸಕ ಡಿ.ಎಸ್. ನಾಯಕ ವಹಿಸಿದ್ದರು. ಪ್ರಾರಂಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ನೆರವೇರಿಸಲಾಯಿತು. ಉಪನ್ಯಾಸಕ ಎಲ್.ಆರ್. ವಾಲ್ಮೀಕಿ ಸ್ವಾಗತಿಸಿದರು. ಎಚ್.ಎಸ್. ಬ್ಯಾಳಿ ನಿರೂಪಿಸಿ, ವಂದಿಸಿದರು. ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

