ಗದಗ

ಮೀನುಗಾರಿಕೆ ಅಭಿವೃದ್ಧಿಗೆ ಸಮಗ್ರ ನೀತಿ

Published On :

ಗದಗ: ರಾಜ್ಯದಲ್ಲಿ ಒಳನಾಡು ಮೀನುಗಾರಿಕೆಗೆ ಸಮಗ್ರ ನೀತಿಯೊಂದನ್ನು ರೂಪಿಸಿ ಸಚಿವ ಸಂಪುಟದ ಅನುಮೋದನೆಗೆ ಸಲ್ಲಿಸಲಾಗುವುದು ಎಂದು ಮೀನುಗಾರಿಕೆ ಸಚಿವ ಅಭಯಚಂದ್ರ ಜೈನ್ ಹೇಳಿದರು.
ಅವರು ಭಾನುವಾರ ಸಂಜೆ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಕೆ.ಎಚ್.ಪಾಟೀಲ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈಗಾಗಲೇ ಒಳನಾಡು ಪ್ರದೇಶಗಳಲ್ಲಿ ಮೀನುಗಾರಿಕೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಿದ್ದು, ಬರುವ ದಿನಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನೂತನ ನೀತಿಗೆ ಅಂತಿಮ ಸ್ಪರ್ಶ ನೀಡಿ ಸಚಿವ ಸಂಪುಟದಲ್ಲಿ ಒಪ್ಪಿಗೆಗೆ ಸಲ್ಲಿಸಲಾಗುವುದು ಎಂದರು.
ಮೈದಾನಕ್ಕೆ ತಾಂತ್ರಿಕ ನೆರವು: ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ 10 ಸಾವಿರ ಆಟದ ಮೈದಾನಗಳಿಗೆ ಕ್ರೀಡಾ ಇಲಾಖೆಯಿಂದ ತಾಂತ್ರಿಕ ನೆರವು ನೀಡಲು ಸೂಚನೆ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ರತಿ ಆಟದ ಮೈದಾನ ಅಚ್ಚುಕಟ್ಟಾಗಿ ನಿರ್ಮಾಣವಾಗುತ್ತಿವೆ ಎಂದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಜಿಪಂ ಸದಸ್ಯ ರೇವಣೆಪ್ಪ ಕೊಂಡಿಕೊಪ್ಪ, ಗದಗ ಎಪಿಎಂಸಿ ಉಪಾಧ್ಯಕ್ಷ ಸಿದ್ದಲಿಂಗೇಶ್ವರಗೌಡ ಪಾಟೀಲ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.