ಆಶ್ರಯ ಮನೆ ಅವ್ಯವಹಾರ ತನಿಖೆಗೆ ಆಗ್ರಹ
ಕನ್ನಡಪ್ರಭ ವಾರ್ತೆ, ಮುಂಡರಗಿ, ಜ. 14
ತಾಲೂಕಿನ ಡಂಬಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರ ಗ್ರಾಮದಲ್ಲಿ ಆಶ್ರಯ ಮನೆಗಳ ಹಂಚಿಕೆಯಲ್ಲಿ ನಿಜವಾದ ಫಲಾನುಭವಿಗಳ ಹೆಸರನ್ನು ತೆಗೆದು ಬೇನಾಮಿ ಹೆಸರಿಗೆ ಉತಾರ ವರ್ಗಾವಣೆ ಮಾಡಿರುವುದರ ಬಗ್ಗೆ ಸಮಗ್ರ ತನಿಖೆ ನಡೆಸಿ ನಿಜವಾದ ಫಲಾನುಭವಿಗಳಿಗೆ ಕೂಡಲೇ ಉತಾರ ನೀಡುವ ವ್ಯವಸ್ಥೆಯಾಗಬೇಕೆಂದು ಆಗ್ರಹಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಬೇನಾಮಿ ಹೆಸರಿಗೆ ಉತಾರ ವರ್ಗಾವಣೆ ಮಾಡಿದ್ದರಿಂದ ದಲಿತರು ಆಶ್ರಯ ಮನೆಗಳಿಂದ ವಂಚಿತರಾಗುತ್ತಿದ್ದಾರೆ. ಗ್ರಾಪಂ ಗಳಲ್ಲಿ ಶೇ. 22ರ ಅನುದಾನ ದಲಿತರ ಸಮುದಾಯದ ಕಾಲೋನಿಗಳ ಅಭಿವೃದ್ಧಿಗೆ ಮೀಸಲಿರಿಸಬೇಕು. ಆದರೆ ಗ್ರಾಪಂ ಈ ಹಣವನ್ನು ದುರುಪಯೋಗ ಮಾಡುತ್ತಿರುವುದರಿಂದ ಕಾಲೋನಿಗಳ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಲ್ಲಿಯ ವಿಶೇಷ ಯೋಜನೆಗಳು ಪರಿಶಿಷ್ಟರಿಗೆ ತಲುಪದೇ ಇರುವುದರಿಂದ ದಲಿತರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಇದರ ಸಮಗ್ರ ತನಿಖೆ ನಡೆಸಿ ದಲಿತರಿಗೆ ಸಿಗಬೇಕಾದ ಸೌಲಭ್ಯಗಳನ್ನು ಸಿಗುವಂತೆ ಮಾಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಮುಂಡರಗಿ ಪುರಸಭೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 50 ಮಹಿಳಾ ಮತ್ತು ಪುರುಷ ಪೌರ ಕಾರ್ಮಿಕರಿಗೆ ಒಂದು ವರ್ಷದಿಂದ ವೇತನವಿಲ್ಲದೇ ಅವರ ಜೀವನ ಅತಂತ್ರ ಸ್ಥಿತಿಯಲ್ಲಿದೆ. ಪುರಸಭೆಯ ಅಧಿಕಾರಿಗಳು ಕೂಡಲೇ ವೇತನವನ್ನು ಬಿಡುಗಡೆಗೊಳಿಸದಿದ್ದರೆ ದ.ಸಂ.ಸ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದೆ ಎಂದು ಮನವಿಯಲ್ಲಿ ತಿಳಿಸಿದೆ. ಮನವಿ ನೀಡುವ ಸಂದರ್ಭದಲ್ಲಿ ತಾಲೂಕು ಸಂಚಾಲಕ ಲಕ್ಷ್ಮಣ ಮುಂಡವಾಡ, ಕೆ.ಎನ್. ದೊಡ್ಡಮನಿ, ಮರಿಯಪ್ಪ ಸಿದ್ದಣ್ಣವರ, ದಂಡೆಪ್ಪ ಹರಿಜನ, ಮಾರುತಿ ಹೊಸಮನಿ, ದೇವಪ್ಪ ಪೂಜಾರ, ಶಿದ್ದಪ್ಪ ನವಲಿ, ಹನುಮಪ್ಪ ಮ್ಯಾಗೇರಿ, ರುದ್ರಪ್ಪ ಏಣಗಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

