ಗದಗ

ಆಸ್ತಿಗಾಗಿ ಘರ್ಷಣೆ: ಹಲವರಿಗೆ ಗಂಭೀರ ಗಾಯ

Published On :

ಗದಗ: ಆಸ್ತಿಗಾಗಿ ಎರಡು ಕುಟುಂಬಗಳ ಮಧ್ಯೆ ಘರ್ಷಣೆಯಾಗಿ ಹಲವರು ಗಾಯಗೊಂಡಿರುವ ಘಟನೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಬುಧವಾರ ಜರುಗಿದೆ.
ಮಾಜಿ ಯೋಧ ಶಂಕರಪ್ಪ ಹಾಗೂ ಬಸವಣ್ಣೆಪ್ಪ ಕುಟುಂಬಗಳ ಮಧ್ಯೆ 30 ವರ್ಷಗಳಿಂದ ಆಸ್ತಿಗಾಗಿ ಇದ್ದ ಕಲಹ ವಿಕೋಪಕ್ಕೆ ಹೋಗಿ ಮಾರಕಾಸ್ತ್ರಗಳಿಂದ ಬಡಿದಾಡಿದ್ದಾರೆ. ಎರಡೂ ಕುಟುಂಬದ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ಕಳುಹಿಸಲಾಗಿದೆ.
ಕಳೆದ 4, 5 ದಿನಗಳಿಂದ ಎರಡೂ ಕುಟುಂಬದವರ ಮಧ್ಯೆ ಗಲಾಟೆ ಆಗುತ್ತಿದ್ದ ಬಗ್ಗೆ ಗ್ರಾಮೀಣ ಪೊಲೀಸರಿಗೆ ತಿಳಿಸಿದರೂ ಕ್ರಮ ಕೈಗೊಂಡಿರಲಿಲ್ಲ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.                          

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.