ಮಗುವಿನ ಬೆಳವಣಿಗೆಗೆ ಸರ್ವರ ಕಾಳಜಿ ಇರಲಿ
ನರೇಗಲ್ಲ: ಎಲ್ಲರೂ ಗಮನ ನೀಡಿದಾಗ ಮಾತ್ರ ಮಕ್ಕಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದು ಜಿಲ್ಲಾ ಉಪಸಮನ್ವಯ ಅಧಿಕಾರಿ ಐ.ಆರ್. ಅಕ್ಕಿ ಹೇಳಿದರು. ಅವರು ಈಚೆಗೆ ಸ್ಥಳೀಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಕಲಿಕೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಶಿಕ್ಷಣ ಇಲಾಖೆ ಅಗತ್ಯವಿರುವ ಸಮವಸ್ತ್ರ, ಬಿಸಿ ಊಟ, ಕ್ಷೀರಭಾಗ್ಯ ಹಾಗೂ ಗಣಕ ಯಂತ್ರದವರೆಗೂ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾವೆಲ್ಲಾ ಶ್ರಮಿಸೋಣ ಎಂದರು. ಜಿಲ್ಲಾ ವಿಷಯ ಪರಿವೀಕ್ಷಕ ಎಚ್.ಎ. ಫಾರೂಕಿ ಮಾತನಾಡಿ, ನಮ್ಮ ಜಿಲ್ಲೆಗಳಲ್ಲಿ ಕೇವಲ ಎರಡು ಸರ್ಕಾರಿ ಉರ್ದು ಪ್ರೌಢಶಾಲೆಗಳಿದ್ದು, ಪ್ರಾಥಮಿಕ ಹಂತವನ್ನು ಮುಗಿಸಿದ ಎಷ್ಟೋ ಮಕ್ಕಳು ಅಲ್ಲಿಯೇ ಶಿಕ್ಷಣವನ್ನು ಮೊಟಕುಗೊಳಿಸುವ ಆತಂಕ ಇರುವುದರಿಂದ ಮಕ್ಕಳ ಮುಂದಿನ ಶಿಕ್ಷಣ ಮುಂದುವರಿಸಲು ಸಂಬಂಧಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಪ್ರತಿ ತಾಲೂಕಿನ ಹೋಬಳಿ ಮಟ್ಟದಲ್ಲಿ ಸರ್ಕಾರಿ ಉರ್ದು ಪ್ರೌಢಶಾಲೆಯನ್ನು ತೆರೆಯಬೇಕು ಎಂದರು. ಪಪಂ ಅಧ್ಯಕ್ಷೆ ಬಸಮ್ಮ ಲಕ್ಕನಗೌಡ್ರ ಕಾರ್ಯಕ್ರಮ ಉದ್ಘಾಟಿಸಿದರು. ನರೇಗಲ್ಲ ಅಂಜುಮನ್ ಕಮಿಟಿ ಅಧ್ಯಕ್ಷ ಎ.ಎ. ನವಲಗುಂದ, ಐ.ಎಸ್. ಮಡಿವಾಳರ, ಯುವರಾಜ ನಾಯಕ, ಕಲ್ಮೇಶ ತೊಂಡಿಹಾಳ, ಬಾಷಾಸಾಬ್ ಕರ್ಮುಡಿ, ಅಬ್ದುಲ್ ರಜಾಕ ಹೊಸ್ಮನಿ, ನಿಂಗಪ್ಪ ಹೊನ್ನಾಪುರ ಉಪಸ್ಥಿತರಿದ್ದರು. ತಾಲೂಕಿನ 22 ಉರ್ದು ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಹ್ಮದ ಹುಸೇನ್ ಕರ್ನೂಲ ಸ್ವಾಗತಿಸಿದರು. ಎ.ಎಂ. ಕೊಪ್ಪಳ ನಿರೂಪಿಸಿದರು. ಎಂ.ಐ. ಶೇಖ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

