ಗದಗ

ಕಾರ್ಯಾಲಯ ಉದ್ಘಾಟನೆ

Published On :

ರೋಣ:  ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಗದಗ, ತಾಲೂಕು ಘಟಕ ರೋಣ ಅವುಗಳ ಆಶ್ರಯದಲ್ಲಿ ಮಂಗಳವಾರ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ 6ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕಾರ್ಯಾಲಯವನ್ನು ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಬರುವ ಫೆಬ್ರುವರಿ ಮೊದಲ ವಾರದಲ್ಲಿ 6ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದ್ದು, ಸಮ್ಮೇಳನದ ಕಾರ್ಯ ಚಟುವಟಿಕೆ ನಡೆಸಲು ಕಾರ್ಯಾಲಯ ಅತಿ ಅವಶ್ಯವಿತ್ತು. ಮಕರ ಸಂಕ್ರಾತಿಯ ಶುಭ ದಿನ ಈ ಕಾರ್ಯಾಲಯ ಉದ್ಘಾಟಿಸಿದ್ದು ಸಂತಸ ತಂದಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಶಿವಪ್ಪ ಕುರಿ, ತಹಸೀಲ್ದಾರ್ ಎ.ಜಿ. ಪಂಡಿತ, ಬಿಇಓ ಡಿ.ಐ. ಅಸುಂಡಿ, ತಾಲೂಕು ಅಧ್ಯಕ್ಷ ಶಿವರಾಜ ಗುರಿಕಾರ, ಗದಗ ತಾಲೂಕು ಅಧ್ಯಕ್ಷ ಕಿಶೋರಬಾಬು ನಾಗರಕಟ್ಟಿ, ನರಗುಂದ ತಾಲೂಕು ಅಧ್ಯಕ್ಷ ಪಿ.ಸಿ. ಕಲಹಾಳ, ಮುಂಡರಗಿ ತಾಲೂಕು ಅಧ್ಯಕ್ಷ ಬಿ.ಎಸ್. ಹಿರೇಮಠ, ಶಿರಹಟ್ಟಿ ತಾಲೂಕು ಅಧ್ಯಕ್ಷ ಕೆ.ಎ. ಬಳಿಗಾರ, ವಿ.ಆರ್. ಗುಡಿಸಾಗರ, ವಿ.ಎನ್. ಅಮಾತಿಗೌಡ್ರ, ಶರಣು ಗೋಗೇರಿ, ವಿ.ಬಿ. ಸೋಮನಕಟ್ಟಮಠ, ಪ್ರಮೀಳಾ ಕೋರಧಾನಿಮಠ, ಸಿ.ಜಿ. ಹುಡೇದಗಡ್ಡಿ, ಸಿ.ವಿ. ಕೇಸರಿ, ರಮಾಕಾಂತ ಕಮತಗಿ, ಶಿವಪುತ್ರಪ್ಪ ದೊಡ್ಡಮನಿ, ಎಂ.ಎಸ್. ದಡೆಸೂರಮಠ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.