ಗದಗ

ಗೃಹ ರಕ್ಷಕರು ಸಮಾಜಕ್ಕೆ ಮಾದರಿ

Published On :

ಗದಗ: ಕರ್ತವ್ಯನಿಷ್ಠ ಗೃಹ ರಕ್ಷಕರು ಸಮಾಜಕ್ಕೆ ಮಾದರಿ ಎಂದು ನಗರಸಭೆ ಸದಸ್ಯ ಹಾಗೂ ಗದಗ ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯ ಚೇರ್‌ಮನ್ ಶ್ರೀನಿವಾಸ ಹುಯಿಲಗೋಳ ಹೇಳಿದರು.
ಅವರು ಈಚೆಗೆ ಗದಗ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯ ಪ್ರಾಂಗಣದಲ್ಲಿ ಜರುಗಿದ ಗೃಹರಕ್ಷಕದಳ ದಿನಾಚರಣೆಯಲ್ಲಿ ಮಾತನಾಡಿದರು. ಗೃಹರಕ್ಷಕರು ಸಮಾಜದ ಸ್ವಾಸ್ಥ್ಯ ಕಾಪಾಡುವುದಕ್ಕಾಗಿ ಸದಾ ತನ್ಮಯರಾಗಿ ಕರ್ತವ್ಯ ನಿರ್ವಹಿಸಲು ಮುಂದಾಗುತ್ತಾರೆ ಎಂದರು. ಅತಿಥಿಗಳಾಗಿ ಆಗಮಿಸಿದ್ದ ಡಿ.ವೈ.ಎಸ್.ಪಿ. ವಿಜಯ ಡಂಬಳ ಮಾತನಾಡಿ, ಗೃಹರಕ್ಷಕರು ಪೊಲೀಸ್ ಇಲಾಖೆಯೊಂದಿಗೆ ಸದಾ ಪೂರಕವಾಗಿ ಕಾರ್ಯನಿರ್ವಹಿಸುತ್ತ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವುದನ್ನು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿದ್ದ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ, ನ್ಯಾಯವಾದಿ ಸುಧೀರಸಿಂಗ್ ಘೋರ್ಪಡೆ ಮಾತನಾಡಿ, ಗೃಹ ರಕ್ಷಕರಿಗೆ ಇಲಾಖೆ, ಸಮಾಜ ಹಾಗೂ ಸಾರ್ವಜನಿಕರು ಗೌರವ ನೀಡುತ್ತಿರುವುದಕ್ಕೆ ಅಭಿನಂದನೆ ತಿಳಿಸಿದರು. ಇದೇ ಸಂದರ್ಭದಲ್ಲಿ ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನ್ಯಾಯವಾದಿ ಬಸವರಾಜ ಗೂಳರಡ್ಡಿ, ಅಶೋಕ ತ್ಯಾಮನವರ, ಬಿ.ಪಿ. ಸವಡಿ, ಸಿ.ಜಿ. ಹೂವಿನ, ಜಿ.ಎಂ. ಪೂಜಾರ, ಶರಣಪ್ಪ ಹಡಪದ ಅವರನ್ನು ಸನ್ಮಾನಿಸಲಾಯಿತು. ಜಿಲ್ಲೆಯ ವಿವಿಧ ಘಟಕಗಳ ಘಟಕಾಧಿಕಾರಿಗಳು ಸೇರಿದಂತೆ ಗೃಹರಕ್ಷಕ, ಗೃಹರಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಬಿ.ಎಂ. ಸಂಶಿ ಸ್ವಾಗತಿಸಿದರು. ಸುರೇಶ ದೊಡ್ಡಮನಿ, ಸುರೇಶ ಹಳ್ಳಿಕೇರಿ ನಿರೂಪಿಸಿದರು. ವಿ.ವಿ. ವಸ್ತ್ರದ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.