ಚೌಡಯ್ಯ ಜಯಂತಿ ಅದ್ಧೂರಿ ಆಚರಣೆಗೆ ಸಿದ್ಧತೆ
ರೋಣ: ಜ. 21ರಂದು ಅಂಬಿಗರ ಚೌಡಯ್ಯರವರ ಜಯಂತಿ ಆಚರಣೆಯನ್ನು ತಾಲೂಕಿನ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಡಬೇಕು. ಜ. 21ರಂದು ತಾಲೂಕು ಹಾಗೂ ವಿವಿಧ ಇಲಾಖೆ ಆಶ್ರಯದಲ್ಲಿ ವೈಭವಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುವುದು. ದಿನಾಚರಣೆ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಉಪಸ್ಥಿತರಿರಬೇಕು ಎಂದು ತಹಸೀಲ್ದಾರ್ ಎ.ಜಿ. ಪಂಡಿತ ಹೇಳಿದರು.
ಅಂಬಿಗರ ಚೌಡಯ್ಯ ಹಾಗೂ ಪ್ರಜಾರಾಜ್ಯೋತ್ಸವ ಅಂಗವಾಗಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 9 ಗಂಟೆಗೆ ಪಟ್ಟಣದ ಸಿದ್ಧಾರೂಢ ಮಠದಿಂದ ಅಂಬಿಗರ ಚೌಡಯ್ಯ ಅವರ ಭಾವಚಿತ್ರ ಮೆರವಣಿಗೆ ಪ್ರಾರಂಭಗೊಳ್ಳಲಿದೆ. 500 ಮಹಿಳೆಯರಿಂದ ಕುಂಭ ಮೆರವಣಿಗೆ ಜರುಗಲಿದೆ. ಅಂಬಿಗರ ಚೌಡಯ್ಯನವರ ಜೀವನ ಶೈಲಿಯ ರೂಪಕ ಪ್ರದರ್ಶನಗೊಳ್ಳಲಿದೆ. ಮೆರವಣಿಗೆಗೆ ಶಾಸಕ ಜಿ.ಎಸ್. ಪಾಟೀಲ್ ಚಾಲನೆ ನೀಡಲಿದ್ದಾರೆ. ಬಳಿಕ ಹಳೇ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಕಾರ್ಯಕ್ರಮ ಜರುಗಲಿದೆ.
ಪ್ರಜಾರಾಜ್ಯೋತ್ಸವ: ಜ. 26ರಂದು ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆ ವತಿಯಿಂದ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಪ್ರಜಾರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು. ತಾಲೂಕಿನ ಎಲ್ಲ ಸರ್ಕಾರಿ ಕಚೇರಿಗಳು ಸೇರಿದಂತೆ ಶಾಲಾ ಕಾಲೇಜುಗಳಲ್ಲಿ ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣ ನೆರವೇರಿಸಬೇಕು ಹಾಗೂ 8 ಗಂಟೆಗೆ ಪಟ್ಟಣದ ಎಸ್.ಆರ್. ಪಾಟೀಲ ಮಾದರಿ ಕೇಂದ್ರ ಶಾಲೆ ಹತ್ತಿರ ಎಲ್ಲ ಅಧಿಕಾರಿಗಳು ಮತ್ತು ಶಾಲೆ ಕಾಲೇಜುಗಳ ವಿದ್ಯಾರ್ಥಿಗಳು ಹಾಜರಿರಬೇಕು. ಇದೇ ಶಾಲೆಯಿಂದ ವಿವಿಧ ಸಂದೇಶ ನೀಡುವ ರೂಪಕಗಳ ಭವ್ಯ ಮೆರವಣಿಗೆ ಹೊರಡಲಿದೆ. 9 ಗಂಟೆಗೆ ತಾಲೂಕು ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸಭೆ ನಡೆಯಲಿದೆ ಎಂದರು. ಬಿಇಒ ಡಿ.ಐ. ಅಸುಂಡಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಲ್.ಎಸ್. ಮೇಸ್ತಾ, ಎನ್.ಎಸ್. ಕೂಡಲ್, ಪಿಎಸ್‌ಐ ಡಿ.ಬಿ. ಪಾಟೀಲ, ಜಲಾನಯನ ಇಲಾಖೆಯ ಕಾಶಪ್ಪನವರ, ಬಸಯ್ಯ ಅಂಗಡಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

