ಗದಗ

ಸಮ್ಮೇಳನ ಅರ್ಥಪೂರ್ಣ ಆಚರಣೆಗೆ ನಿರ್ಧಾರ

Published On :

ಗದಗ: ಗದಗ ಜಿಲ್ಲಾ 6ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆಬ್ರವರಿ 2ನೇ ವಾರದಲ್ಲಿ ರೋಣ ಪಟ್ಟಣದಲ್ಲಿ ಅದ್ಧೂರಿಯಾಗಿ ಮತ್ತು ವೈಶಿಷ್ಟ್ಯಪೂರ್ಣವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಬುಧವಾರ ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ಗದಗ ಜಿಲ್ಲಾ ಹಾಗೂ ರೋಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳೊಂದಿಗೆ ಗದಗ ಜಿಲ್ಲಾ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಫೆಬ್ರವರಿ 2ನೇ ವಾರದಲ್ಲಿ ನಡೆಯಲಿರುವ ಗದಗ ಜಿಲ್ಲಾ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಆಹ್ವಾನಿಸಲಾಗುವುದು.
ಸಮ್ಮೇಳನ ಗದಗ ಜಿಲ್ಲೆಯಲ್ಲಿ ಈ ಹಿಂದೆ ನಡೆದ ಜಿಲ್ಲಾ ಸಮ್ಮೇಳನಗಳಿಗಿಂತ ವಿಭಿನ್ನವಾಗಿ, ಅರ್ಥಪೂರ್ಣವಾಗಿ ನಡೆಸೋಣ. ಸಮ್ಮೇಳನ ವ್ಯವಸ್ಥಿತವಾಗಿ ನಡೆಸಲು ಗದಗ ಜಿಲ್ಲಾಡಳಿತ ಹಾಗೂ ರೋಣ ತಾಲೂಕು ಆಡಳಿತಗಳು ಸಂಪೂರ್ಣ ಶ್ರಮಿಸಲಿವೆ.
ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ನರಗುಂದ ಶಾಸಕ ಬಿ.ಆರ್. ಯಾವಗಲ್ಲ, ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಶ್ರಮಿಸಲಿದ್ದಾರೆ. ಇದರೊಂದಿಗೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ, ಸಂಘ-ಸಂಸ್ಥೆಗಳ ಪದಾಧಿಕಾರಿಗಳ, ಕಸಾಪ ಗೌರವಾನ್ವಿತ ಸದಸ್ಯರುಗಳ, ಕನ್ನಡಪರ ಸಂಘಟನೆಗಳ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ನೌಕರರ ಸಂಘಟನೆಗಳ ಪದಾಧಿಕಾರಿಗಳ, ಹಿರಿಯ ಸಾಹಿತಿಗಳ, ಕನ್ನಡಾಭಿಮಾನಿಗಳ ಸಹಕಾರ ಕೋರಲಾಗುವುದು ಎಂದರು.
ಸಭೆಯಲ್ಲಿ ಗದಗ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಎಂ. ಕುರಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಕೆ.ಬಿ. ತಳಗೇರಿ, ಕೆ.ಎಚ್. ಬೇಲೂರ, ಜಿಲ್ಲಾ ಗೌರವ ಕಾರ್ಯದರ್ಶಿ ಶರಣು ಗೋಗೇರಿ, ಡಾ. ಸಂಗಮೇಶ ತಮ್ಮನಗೌಡ್ರ, ಖಜಾಂಚಿ ಮಲ್ಲೇಶ ಡಿ.ಎಚ್, ಡಾ. ಶಿವರಾಜ ಗುರಿಕಾರ, ಕೆ.ಎ. ಬಳಿಗೇರ, ಕಿಶೋರಬಾಬು ನಾಗರಕಟ್ಟಿ, ಪಿ.ಸಿ. ಕಲಹಾಳ, ಎಸ್.ಬಿ. ಹಿರೇಮಠ, ಪಿ.ಎಸ್. ಅಣ್ಣಿಗೇರಿ, ಡಿ.ಎಸ್. ತಳವಾರ, ರಮೇಶ ಸಜ್ಜಗಾರ, ಜಿ.ಎಸ್. ಯತ್ನಟ್ಟಿ, ಐ.ಆರ್. ಹಡಗಲಿ, ಎಂ.ಎಸ್. ಧಡೇಸೂರಮಠ, ದೊಡ್ಡಯ್ಯ ಅರವಟಗಿಮಠ, ಕೆ.ಎಸ್. ಕಳಕಣ್ಣವರ, ಎಸ್.ಎಚ್. ಬೀರಕಬ್ಬಿ, ಮಲ್ಲಿಕಾರ್ಜುನ ಪೂಜಾರ, ಎಸ್.ಎಫ್. ಸಿದ್ನೆಕೊಪ್ಪ, ಎಸ್.ಎಲ್. ಗುಳೇದಗುಡ್ಡ, ಬಾಪು ಅಯ್ಯಪ್ಪನವರ, ಸಿ.ಕೆ. ಕೇಸರಿ, ಮಹಾಂತೇಶ ಮದ್ನೂರ ಮುಂತಾದವರು ಪಾಲ್ಗೊಂಡಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.