ಸಮ್ಮೇಳನ: ಇಂದು ಸಭೆ
ರೋಣ: ರೋಣದಲ್ಲಿ ನಡೆಯಲಿರುವ ಗದಗ ಜಿಲ್ಲಾ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಿದ್ಧತೆ ಕುರಿತು ಚರ್ಚಿಸಲು ಜ. 18ರಂದು ಪಟ್ಟಣದ ಅಂದಾನಪ್ಪ ದೊಡ್ಡಮೇಟಿ ಸಭಾಭವನದಲ್ಲಿ ಸರಣಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಬೆಳಗ್ಗೆ 11ಕ್ಕೆ ರೋಣ ತಾಲೂಕಿನ ಎಲ್ಲ ಯುವಕ ಸಂಘಗಳ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಭೆ. ಮಧ್ಯಾಹ್ನ 1ಕ್ಕೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಪದಾಧಿಕಾರಿಗಳ ಸಭೆ. 3ಕ್ಕೆ ರೋಣ, ಗಜೇಂದ್ರಗಡ ಪುರಸಭೆ ಹಾಗೂ ನರೇಗಲ್ ಪಟ್ಟಣ ಪಂಚಾಯತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಮತ್ತು ಮುಖ್ಯಾಧಿಕಾರಿಗಳ ಸಭೆ ನಡೆಯಲಿದೆ. ಸಂಜೆ 4ಕ್ಕೆ ರೋಣ, ಗಜೇಂದ್ರಗಡ, ನರೇಗಲ್ ಹಾಗೂ ಹೊಳೆಆಲೂರಗಳ ವ್ಯಾಪಾರಸ್ಥರ ಹಾಗೂ ಎ.ಪಿ.ಎಂ.ಸಿ. ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಸಭೆ ಕರೆಯಲಾಗಿದೆ. ಈ ಸಭೆಗಳಲ್ಲಿ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಶಿವಪ್ಪ ಕುರಿ, ಶರಣು ಗೋಗೇರಿ, ಡಾ. ಸಂಗಮೇಶ ತಮ್ಮನಗೌಡ್ರ, ಮಲ್ಲೇಶ ಡಿ. ಎಚ್, ಡಾ. ಶಿವರಾಜ ಗುರಿಕಾರ ರೋಣ ತಾಲೂಕಿನ ಕಸಾಪ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ನಾಳೆ ಪಲ್ಸ್ ಪೋಲಿಯೋ
ಗದಗ: ಜ. 19ರಂದು ಜಿಲ್ಲೆಯಾದ್ಯಂತ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ. ನಗರ ಪ್ರದೇಶಗಳಲ್ಲಿ 238, ಗ್ರಾಮೀಣ ಪ್ರದೇಶದಲ್ಲಿ 492 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 730 ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಇದಕ್ಕಾಗಿ 1,606 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಜಿಪಂ ಅಧ್ಯಕ್ಷೆ ಕಮಲಮ್ಮ ಸಜ್ಜನ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

