ಗದಗ

ಇಂದು ಬಿಸಿಎನ್ ವಿದ್ಯಾ ಸಂಸ್ಥೆಗಳ ಮಹಾಸಮ್ಮೇಳನ

Published On :

ಲಕ್ಷ್ಮೇಶ್ವರ:  ಪಟ್ಟಣದ ಬಸವರಾಜ ನೆಲವಿಗಿ ವಿದ್ಯಾಸಂಸ್ಥೆಗಳ ಮಹಾಸಮ್ಮೇಳನ ಜ. 19ರ ಬೆಳಗ್ಗೆ 9.30ಕ್ಕೆ ಉದ್ಘಾಟನೆಗೊಳ್ಳಲಿದೆ. ಸಂಸ್ಥೆಯ ಅಧ್ಯಕ್ಷ ಬಸವರಾಜ ನೆಲವಿಗಿ ಸಮಾರಂಭದ ಧ್ವಜಾರೋಹಣ ನೆರವೇರಿಸುವರು. ಶಾಸಕ ರಾಮಕೃಷ್ಣ ದೊಡ್ಡಮನಿ ಉದ್ಘಾಟಿಸುವರು.  ಗದಗ ಜಿಪಂ ಅಧ್ಯಕ್ಷೆ ಕಮಲವ್ವ ಸಜ್ಜನರ, ಉಪಾಧ್ಯಕ್ಷ ರಮೇಶ ಮುಂದಿನಮನಿ, ಪುರಸಭೆ ಅಧ್ಯಕ್ಷೆ ಗಂಗಮ್ಮ ಫಕ್ಕಿರಸ್ವಾಮಿಮಠ, ಮುಳಗುಂದ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಚಂದ್ರಶೇಖರ ಬಡ್ನಿ, ಗದಗ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ, ವೈ.ಎನ್. ಗೌಡರ, ಬಿಇಓ ಆರ್.ಎಸ್. ಬುರುಡಿ, ಪಿಎಸ್ಐ ವಿಕಾಶ ಲಮಾಣಿ ಆಗಮಿಸಲಿದ್ದಾರೆ.  ವಿಜ್ಞಾನ ವಸ್ತು ಪ್ರದರ್ಶನವನ್ನು ಶಿಲ್ಪಾ ಶೆಟ್ಟರ್, ತಾಪಂ ಉಪಾಧ್ಯಕ್ಷೆ ಶಾರದಾ ಕವಲೂರ ಕಲಾ ಪ್ರದರ್ಶನವನ್ನು ಹಾಗೂ ರಂಗೋಲಿ ಪ್ರದರ್ಶನವನ್ನು ಮಾಗಡಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀದೇವಿ ಹಿರೇಮಠ ಉದ್ಘಾಟಿಸುವರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.