ಗದಗ

ಕಾಡು ಹಂದಿ ದಾಳಿ: ಇಬ್ಬರಿಗೆ ಗಾಯ

Published On :

ಶಿರಹಟ್ಟಿ:  ತಾಲೂಕಿನ ವಡವಿ ಗ್ರಾಮದಲ್ಲಿ ಶನಿವಾರ ತಡ ರಾತ್ರಿ ಬಹಿರ್ದೆಸೆಗೆ ತೆರಳಿದ್ದ ಇಬ್ಬರು ಮಹಿಳೆಯರ ಮೇಲೆ ಕಾಡು ಹಂದಿ ದಾಳಿ ನಡೆಸಿದ್ದು, ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಮಹಿಳೆಯರು ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರತ್ನವ್ವ ಹಾರೋಗೇರಿ, ಯಮುನವ್ವ ಪಂಚಪ್ಪ ಜ್ಯೋತಿ ಕಾಡು ಹಂದಿ ದಾಳಿಗೆ ಸಿಲುಕಿ ಗಾಯಗೊಂಡಿವರಾಗಿದ್ದಾರೆ. ಭಾನುವಾರ ಶಾಸಕ ರಾಮಕೃಷ್ಣ ದೊಡ್ಡಮನಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು. ನಂತರ ಮಾತನಾಡಿದ ಅವರು, ಗಂಭೀರ ಮಹಿಳೆಯರ ಹೆಚ್ಚಿನ ಚಿಕಿತ್ಸೆಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.
ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಸದಸ್ಯ ಸಂತೋಷ ಕುರಿ, ವೈ.ಎಸ್. ಪಾಟೀಲ, ಮಂಜು ಘಂಟಿ, ವಲಯ ಅರಣ್ಯಾಧಿಕಾರಿ ಪಿ.ಸಿ. ಹಿರೇಮನಿ, ಪಿಎಸ್‌ಐ ಆರ್.ಎಚ್. ಕಟ್ಟಿಮನಿ, ವೈದ್ಯಾಧಿಕಾರಿ ಎ.ಎ. ಮಳಗಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.