ಗದಗ

ಸುದ್ದಿಸಂಕ್ಷೇಪ

Published On :

ಇಂದು ಜನಸ್ಪಂದನ ಕಾರ್ಯಕ್ರಮ
ಗದಗ:  ಗದಗ ಹಾಗೂ ಶಿರಹಟ್ಟಿ ತಾಲೂಕುಗಳಿಗೆ ಸಂಬಂಧಿಸಿದಂತೆ ಸಚಿವರ ಜನಸ್ಪಂದನ ಕಾರ್ಯಕ್ರಮ ಜ. 20ರ ಬೆಳಗ್ಗೆ 8.30ರಿಂದ 11.30 ರವರೆಗೆ ಜಿಲ್ಲಾಡಳಿತ ಭವನದಲ್ಲಿ ಜರುಗಲಿದೆ. ಈ ತಾಲೂಕುಗಳ ಸಾರ್ವಜನಿಕರು ಸರ್ಕಾರಿ ಸೇವೆಗಳ ಕುರಿತ ಸಮಸ್ಯೆ, ಕುಂದುಕೊರತೆ, ದೂರು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರಿಗೆ ಅಹವಾಲುಗಳನ್ನು ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ತಿಳಿಸಿದ್ದಾರೆ.
ಸುಭದ್ರಬಾಯಿ ನಿಧನ
ಗದಗ:  ನಗರದ ಸುಭದ್ರಬಾಯಿ ಶಿವಬಸವೇಶ್ವರ ಅಲಮೇಲಕರ (85) ಈಚೆಗೆ ನಿಧನರಾದರು. ಮೃತರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ.
ಇಂದು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಉದ್ಘಾಟನೆ
ಗದಗ:  ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮವು ಜ. 20 ಬೆಳಗ್ಗೆ 11ಕ್ಕೆ ನಗರದ ಮುಳಗುಂದ ರಸ್ತೆಯ ನೌಕರರ ಭವನದಲ್ಲಿ ನಡೆಯಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ. ಪುರುಷೋತ್ತಮ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.