ಕಾಲ್ಪನಿಕ ವೇತನ ಮಸೂದೆ ಮಂಡಿಸಬೇಡಿ
ಕನ್ನಡಪ್ರಭ ವಾರ್ತೆ ಗದಗ, ಜ. 20
ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಅನುದಾನರಹಿತ ಅವಧಿಗೆ ಎಲ್ಲ ಸೌಲಭ್ಯ ನೀಡಬೇಕೆಂದು ಈಚೆಗೆ ಹೈಕೋರ್ಟ್, ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಮೊರೆ ಹೋಗಲಾರದ ಸಿಬ್ಬಂದಿ ಮುಂದೆ ನ್ಯಾಯಾಲಯದ ಬಾಗಿಲು ತಟ್ಟದ ಹಾಗೆ ತಡೆ ಹಿಡಿಯಲು ಸುಗ್ರಿವಾಜ್ಞೆ ಹೊರಡಿಸಲು ಸರ್ಕಾರದ ಪ್ರಯತ್ನ ವಿಫಲವಾದ ಕಾರಣ ಜ. 22ರಿಂದ ಪ್ರಾರಂಭವಾಗುವ ಅಧಿವೇಶನದಲ್ಲಿ ಮಸೂದೆ ಮಂಡಿಸುವ ಪ್ರಯತ್ನ ಮಾಡಬಾರದೆಂದು ರಾಜ್ಯ ಪಪೂ ಮಹಾವಿದ್ಯಾಲಯಗಳ ನೌಕರರ ಸಂಘದ ಗೌರವಾಧ್ಯಕ್ಷ ಪ್ರಾ. ಎಸ್.ವಿ. ಸಂಕನೂರ ಸರ್ಕಾರಕ್ಕೆ ಒತ್ತಾಯಿಸಿದರು.
ಶನಿವಾರ ರಾಜ್ಯ ಪಪೂ ಮಹಾವಿದ್ಯಾಲಯಗಳ ನೌಕರರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಏರ್ಪಡಿಸಿದ್ದ ಒಂದು ದಿನದ ಸಾಂಕೇತಿಕ ಧರಣಿ ಉದ್ದೇಶಿಸಿ ಅವರು ಮಾತನಾಡಿದರು.
ಸಂವಿಧಾನದ ಕಲಂ 14ರಂತೆ ಕಾನೂನಿನ ಮುಂದೆ ಎಲ್ಲರೂ ಸರಿಸಮಾನರು ಹಾಗೂ ಕಾನೂನಿನಡಿಯಲ್ಲಿ ರಕ್ಷಣೆ ಪಡೆಯುವಲ್ಲಿ ಸಮಾನ ಹಕ್ಕು ಹೊಂದಿರುವರು. ಹೀಗಿರುವಾಗ ಸರ್ಕಾರ ಮಸೂದೆ ಮಂಡಿಸಿ ಕಾನೂನು ಜಾರಿಗೆ ತಂದರೆ ಸಂವಿಧಾನದ ಈ ನಿಯಮದ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ನ್ಯಾಯಾಲಯಗಳ ತೀರ್ಪಿನ ಅಡಿಯಲ್ಲಿ ಇಲಾಖೆಯವರು ಸಂಗ್ರಹಿಸಿದ ಮಾಹಿತಿಯೂ ತಪ್ಪಾಗಿದ್ದು, ಸತ್ಯಾಸತ್ಯತೆ ತಿಳಿದುಕೊಳ್ಳಲು ಮತ್ತು ಈ ಸಮಸ್ಯೆ ಬಗೆಹರಿಸಲು ರಾಜ್ಯದಲ್ಲಿ ಪದವೀಧರರ ಹಾಗೂ ಶಿಕ್ಷಕರ ಮತಕ್ಷೇತ್ರದಿಂದ ಆಯ್ಕೆಯಾದ ಎಲ್ಲ ವಿಪ ಸದಸ್ಯರು ಹಾಗೂ ಎಲ್ಲ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳ ಶೀಘ್ರ ಸಭೆ ಕರೆಯಲು ಒತ್ತಾಯಿಸಿದ್ದಾರೆ.
ಸಾಂಕೇತಿಕ ಧರಣಿ ಮುಕ್ತಾಯದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳ 200ಕ್ಕೂ ಹೆಚ್ಚು ಸಿಬ್ಬಂದಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಪ್ರಾ. ಎಂ.ಸಿ. ಕಟ್ಟಿಮನಿ, ಪ್ರಧಾನ ಕಾರ್ಯದರ್ಶಿ ಅಶೋಕ ಅಂಗಡಿ, ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಎಸ್.ಎನ್. ಮಳಲಿ, ಆರ್. ಈಶ್ವರ ಶೆಟ್ಟರ್, ಜಿ.ಎಂ. ಹಕಾರಿ, ಆರ್.ಎಫ್. ರಿತ್ತಿ, ಎಸ್.ಎನ್. ಹೊಟ್ಟಿನ, ಪಿ.ಎಸ್. ಕಾಶಪ್ಪನವರ, ಆರ್.ಎಸ್. ಪಾಟೀಲ, ಆರ್.ವಿ.ಪಾಟೀಲ, ಎಸ್.ಸಿ. ಹೆದ್ದೂರಿ, ಎಸ್.ಎಚ್. ಗೋರೆಬಾಳ, ವಿ.ಎಫ್. ಅಂಗಡಿ, ಬಿ.ಎಲ್. ಚವ್ಹಾಣ, ಮುಖ್ಯೋಪಾಧ್ಯಾಯ ಬಿ.ಎನ್. ಪೊಲೀಸ್ಪಾಟೀಲ, ಎ.ಎಂ. ಮೇಟಿ, ಬಿ.ಎಸ್. ಹಿರೇಮಠ, ಎಂ.ಎ. ಓಲೆಕಾರ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

