ಕ್ಷಕರ ಜ್ಯೇಷ್ಠತಾ ಪಟ್ಟಿ ಪ್ರಕಟ
ಗದಗ: 2013-14ನೇ ಸಾಲಿಗಾಗಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೆ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ಹಿಂದಿ ವಿಷಯದ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯಲ್ಲಿ ಖಾಲಿ ಇರುವ ಎ ವಲಯದ ಹುದ್ದೆಗಳಿಗೆ ಸಿ ವಲಯದಿಂದ ಬಿ ವಲಯಕ್ಕೆ ಹಾಗೂ ಬಿ ವಲಯದಿಂದ ಎ ವಲಯಕ್ಕೆ ಹುದ್ದೆಗಳನ್ನು ಭರ್ತಿ ಮಾಡಲು, ಖಾಲಿ ಇರುವ ಸಿ ವಲಯದ ಹುದ್ದೆಗಳಿಗೆ ಬಡ್ತಿ ನೀಡುವ ಪ್ರಕ್ರಿಯೆ ಜರುಗಿಸಬೇಕಾಗಿದ್ದು, ಪ್ರಸ್ತುತ ಬಿ ಮತ್ತು ಸಿ ವಲಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಿಂದಿ ವಿಷಯದ ಶಿಕ್ಷಕರ ಜ್ಯೇಷ್ಠಾತಾ ಪಟ್ಟಿಯನ್ನು ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತಂತೆ ಬಾಧಿತ ಶಿಕ್ಷಕರು ತಮ್ಮ ಆಕ್ಷೇಪಣೆಗಳನ್ನು ಮುಖ್ಯೋಪಾಧ್ಯಾಯರ ಮುಖಾಂತರ ಸೇವಾ ಪುಸ್ತಕದಲ್ಲಿ ಇರುವಂತೆ ಮಾಹಿತಿಯನ್ನು ದೃಢೀಕರಿಸಿ ಜ. 24 ರೊಳಗಾಗಿ ಖುದ್ದಾಗಿ ಸಲ್ಲಿಸುವಂತೆ ತಿಳಿಸಲಾಗಿದೆ. ಜ. 27ರಂದು ಎ ಮತ್ತು ಬಿ ವಲಯದಲ್ಲಿ ಖಾಲಿ ಇರುವ ಹಿಂದಿ ವಿಷಯದ ಪ್ರೌಢಶಾಲಾ ಶಿಕ್ಷಕರ ಖಾಲಿ ಹುದ್ದೆಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗುವುದು. ಸಂಬಂಧಿಸಿದ ಶಿಕ್ಷಕರು ಹಾಜರಿರಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ವಿ. ರಾಜೇಂದ್ರ ಪ್ರಸಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

