ಗದಗ

ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ಮನವಿ

Published On :

ನರಗುಂದ:  ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡದ ಪತ್ರಕರ್ತ ಡಿ.ಜಿ. ಮೋಮಿನ ಮೇಲೆ ಬಿಜೆಪಿ ಮುಖಂಡ ಎಸ್.ಎಚ್. ಸೋಂಪುರವರು ಹಲ್ಲೆ ಮಾಡಿದ್ದನ್ನು ಖಂಡಿಸಿ ಬುಧವಾರ ನರಗುಂದ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘವು ತಹಸೀಲ್ದಾರ್ಗೆ ಮನಿವಿ ನೀಡಿ ಆರೋಪಿತರನ್ನು ಬಂಧಿಸಲು ಆಗ್ರಹಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಪದಾಧಿಕಾರಿಗಳು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ತನ್ನದೇ ಆದ ಸ್ವಾತಂತ್ರ್ಯ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಜಕೀಯ ಮುಖಂಡರು ಮತ್ತು ಕೆಲವು ಸಮಾಜ ಘಾತುಕರು ಪತ್ರಕರ್ತರ ಮತ್ತು ಛಾಯಾಗ್ರಾಹಕರ ಮೇಲೆ ಹಲ್ಲೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಈ ಕುರಿತು ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತರಾದ ಎಸ್.ಎಸ್. ಮಣ್ಣೂರಮಠ, ಸಿ.ಬಿ. ಸುಬೇದಾರ, ಪ್ರಭು ಗುಡಾರದ, ಎಸ್.ಜಿ. ತೆಗ್ಗಿನಮನಿ, ಬಸವರಾಜ ಹಲಕುರ್ಕಿ, ಎಸ್.ಎಸ್. ಖಾನಪ್ಪಗೌಡರ್, ಆನಂದ ಬನಪ್ಪನರ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.