ಗದಗ

ಸ್ಪರ್ಧಾತ್ಮಕ ತರಬೇತಿ ಅವಶ್ಯ: ದೊಡ್ಡಮನಿ

Published On :

ಮುಂಡರಗಿ:  ವಿದ್ಯಾರ್ಥಿಗಳು ಸ್ಪರ್ಧಾತ್ಮಕ ತರಬೇತಿಗಳನ್ನು ಪಡೆಯುವುದು ಅವಶ್ಯವಾಗಿದೆ ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಸೋಮವಾರ ಸ್ಥಳೀಯ ಜ.ಅ. ವಿದ್ಯಾ ಸಮಿತಿಯ ಕ.ರಾ. ಬೆಲ್ಲದ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಮೈಸೂರ ಮುಂಡರಗಿ ಶಾಖೆ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿರುವ 10 ದಿನಗಳ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು.
ನಾಡೋಜ, ಡಾ. ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ಬ್ಯಾಂಕ್‌ಗಳು ಇರುವುದರಿಂದ ಗ್ರಾಹಕರು ತಮ್ಮ ಹಣವನ್ನು ಬ್ಯಾಂಕುಗಳಲ್ಲಿ ತೊಡಗಿಸಿ ಸಮಾಧಾನದಿಂದ ಇರಬಹುದು. ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳೆಲ್ಲರೂ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಯಶಸ್ವಿಯಾಗಲೆಂದು ಹಾರೈಸಿದರು. ಈ ಸಂದರ್ಭದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ ಮುಂಡರಗಿ ಶಾಖೆ ಮತ್ತು ಶಾಸಕರ ಸಹಕಾರದಿಂದ ಕೊಡಮಾಡಿದ ಶುದ್ಧ ನೀರಿನ ಘಟಕವನ್ನು ಉದ್ಘಾಟಿಸಲಾಯಿತು.
ಸ್ಟೇಟ್ ಬ್ಯಾಂಕ್ ಆಫ್ ಮೈಸೂರ ಮುಂಡರಗಿ ಶಾಖೆಯ ಪ್ರಬಂಧಕ ಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಡಾ. ಎಂ.ಬಿ.ಬೆಳವಟಗಿ ಅಧ್ಯಕ್ಷತೆ ವಹಿಸಿದ್ದರು. ತರಬೇತಿ ಸಂಯೋಜಕ ಪ್ರೊ. ಆರ್.ಕೆ. ರಾಯನಗೌಡರ ಸ್ವಾಗತಿಸಿ, ಡಾ. ಬಿ.ಜಿ.ಜವಳಿ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.