ಗದಗ

ಉದ್ಯೋಗ ಖಾತ್ರಿ ಯೋಜನೆ ಲಾಭ ಪಡೆಯಿರಿ: ತಳವಾರ

Published On :

ರೋಣ:  ತಾಲೂಕಿನ ಹುನಗುಂಡಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಎಸ್‌ಸಿ, ಎಸ್‌ಟಿ ಪಂಗಡ ಹಾಗೂ ಚಿಕ್ಕ ಹಿಡುವಳಿದಾರರು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅನೇಕ ಸೌಕರ್ಯಗಳಿವೆ. ಅವುಗಳ ಲಾಭವನ್ನು ಪಡೆಯಬೇಕು ಎಂದು ಹುನಗುಂಡಿ ಗ್ರಾಪಂ ಉಪಾಧ್ಯಕ್ಷ ಬಸವಂತಪ್ಪ ತಳವಾರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ವೈಯಕ್ತಿಕ ಚಿಕ್ಕ ಹಿಡುವಳಿದಾರರಿಗೆ ದನದ ಕೊಟ್ಟಿಗೆ, ಕುರಿ ದಡ್ಡಿ, ಕೃಷಿ ಹೊಂಡ, ಬದು ನಿರ್ಮಾಣ, ಅರಣ್ಯೀಕರಣ, ಭೂಮಿ ಅಭಿವೃದ್ಧಿ ಪಡಿಸುವುದು ಸೇರಿದಂತೆ ಅನೇಕ ಸೌಲಭ್ಯಗಳಿವೆ. ಅವುಗಳ ಲಾಭ ಪಡೆಯಲು ಮತ್ತು ಈ ಕುರಿತು ಮಾಹಿತಿ ಪಡೆಯಲು ಗ್ರಾಪಂ ಪಿಡಿಒ ಹಾಗೂ ಗ್ರಾಪಂ ಕಾರ್ಯಾಲಯವನ್ನು ಸಂಪರ್ಕಿಸಬೇಕು. ಅರ್ಹರು ಫಾರ್ಮ್ ನಂಬರ್ 6 ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.