ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಆಯ್ಕೆಗೊಳಿಸಿ
ಕನ್ನಡಪ್ರಭ ವಾರ್ತೆ, ಗದಗ, ಜ. 26
ಗದಗ-ಬೆಟಗೇರಿ ನಗರಸಭೆ ಚುನಾವಣೆ ಮುಗಿದು ಸದಸ್ಯರ ಆಯ್ಕೆಯಾಗಿ 10 ತಿಂಗಳು ಕಳೆದರೂ 35 ವಾರ್ಡ್ಗಳನ್ನೊಳಗೊಂಡ ಗದಗ-ಬೆಟಗೇರಿ ಅವಳಿ ನಗರದ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆ ನಡೆಯದೇ ಇರುವುದು ಖೇದಕರ ಸಂಗತಿ. ಈ ಕೂಡಲೇ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಆಯ್ಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ನೇಹಲೋಕ ವಿವಿಧೋದ್ದೇಶಗಳ ಸಂಘದ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ನಗರದಲ್ಲಿ ಸ್ವಚ್ಛತಾ ಕಾರ್ಯ ಹೊರತುಪಡಿಸಿ, ಬೇರೆ ಯಾವ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿಲ್ಲ. ಕುಡಿಯುವ ನೀರಿನ ಸಮಸ್ಯೆಯಂತೂ ಹೇಳತೀರದಾಗಿದೆ. 18 ರಿಂದ 20 ದಿನಕ್ಕೆ ಮೇಲ್ಪಟ್ಟು ಅವಳಿ ನಗರದಲ್ಲಿ ನೀರು ಸರಬರಾಜು ಆಗುತ್ತಿದೆ. ಇಂತಹ ಹಲವಾರು ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ಬಗ್ಗೆ ಸದಸ್ಯರಲ್ಲಿ ಕೇಳಿದರೆ, ಸ್ಥಾನಗಳ ಆಯ್ಕೆ ಪ್ರಕ್ರಿಯೆ ನ್ಯಾಯಾಲಯದಲ್ಲಿದೆ ಎಂದು ಸಬೂಬು ಹೇಳಿ ಕೈ ಚೆಲ್ಲುತ್ತಾರೆ. ಈ ಕಾರಣದಿಂದ ಗದಗ-ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ. ಜಿಲ್ಲಾಧಿಕಾರಿಯವರು ಕೂಡಲೇ ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕೆಂದು ಸ್ನೇಹಲೋಕ ವಿವಿಧೋದ್ದೇಶಗಳ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಅನುಪಸ್ಥಿತಿಯಲ್ಲಿ ಉಪ ಜಿಲ್ಲಾಧಿಕಾರಿ ನಾಗರಾಜ ಅವರಿಗೆ ಮನವಿ ಸಲ್ಲಿಸಿದರು. ಆಗ್ರಹಿಸಿ ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ನಾಗರಾಜ ಮಾತನಾಡಿ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ಬಸಯ್ಯ ನಂದಿಕೋಲಮಠ, ಸಂಘದ ಅಧ್ಯಕ್ಷ ಬಾಪು ಆರಟ್ಟಿ, ಕೃಷ್ಣಾ ಹಡಪದ, ಸಂತೋಷ ಕಬಾಡರ, ಮಂಜುನಾಥ ಮಜ್ಜಿಗುಡ್ಡದ, ಶ್ರೀಕಾಂತ ಬಾಕಳೆ, ಶಿವಕುಮಾರ ಚವಡಿ, ಗಿರಿಧರ ನರಸಾಪುರ, ರವಿ ಚಿನಿವಾಲರ, ಪ್ರವೀಣ ಜಿತೂರಿ, ರಾಮಚಂದ್ರ ಶಿದ್ಲಿಂಗ, ರಾಘವೇಂದ್ರ ಪವಾರ, ಮಹಾಂತೇಶ ಮದ್ನೂರ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

