ಅತಿಥಿ ಉಪನ್ಯಾಸಕರು ಮುಷ್ಕರ ಕೈ ಬಿಡಲಿ
ಕನ್ನಡಪ್ರಭ ವಾರ್ತೆ, ನರಗುಂದ, ಜ. 26
ರಾಜ್ಯದ 10,420 ಅತಿಥಿ ಉಪನ್ಯಾಸಕರ ಹಲವಾರು ಬೇಡಿಕೆ ಈಡೇರಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಅತಿಥಿ ಉಪನ್ಯಾಸಕರು ಮುಷ್ಕರ ಕೈ ಬಿಡಬೇಕೆಂದು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ಅವರು ಭಾನುವಾರ ಸಂಜೆ ಪಟ್ಟಣದ ವೆಂಕಟೇಶ್ವರ ದೇವಸ್ಥಾನ ಮತ್ತು ಬಾಬಾಸಾಹೇಬರ ಅರಮನೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಅತಿಥಿ ಉಪನ್ಯಾಸಕರು ಗೌರವಧನದಲ್ಲಿ ಸೇವೆ ಸಲ್ಲಿಸುತ್ತಿರುವುದು ನಮ್ಮಗೆ ಹೆಮ್ಮ ತಂದಿದೆ. ಅವರು ತಮ್ಮ ಬೇಡಿಕೆಗಳನ್ನು ಸರ್ಕಾರ ಮುಂದೆ ಇಟ್ಟಿದ್ದಾರೆ. ಇವುಗಳನ್ನು ಈಡೇರಸಲು ಸರ್ಕಾರ ಗಂಭೀರ ಪರಿಶೀಲನೆ ನಡೆಸುತ್ತಿದೆ. ಅದಕ್ಕಾಗಿ ಅವರು ಮುಷ್ಕರವನ್ನು ಕೈ ಬಿಟ್ಟು ಮಕ್ಕಳ ಶಿಕ್ಷಣದ ಕಡೆ ಗಮನ ನೀಡಬೇಕು. ಹಿಂದಿನ ಸರ್ಕಾರ 3 ವರ್ಷದಿಂದ ನಿಮಗೆ ಗೌರವಧನ ನೀಡಿರಲಿಲ್ಲ. ನಮ್ಮ ಸರ್ಕಾರ ಬಂದ ತಕ್ಷಣವೇ ರು. 53 ಕೋಟಿ ಹಣ ಬಿಡುಗಡೆ ಮಾಡಿದೆ. ಈಗ ಗೌರವ ಧನ ವಿಳಂಬ ಆಗದಂತೆ ನೋಡಿಕೊಳ್ಳುತ್ತೇವೆ. ಸದ್ಯದಲ್ಲಿಯೇ 430 ನಂತರ 483 ಉಪನ್ಯಾಸಕರ ಹುದ್ದೆ ಭರ್ತಿ ಮಾಡಲು ಹಣಕಾಸು ಇಲಾಖೆ ಪರವಾನಗಿ ನೀಡಿದೆ. ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲಾಗುವುದೆಂದು ಹೇಳಿದರು.
ಬಂಡಾಯ ನಾಡಿನ ಬಾಬಾಸಾಹೇಬರ ಅರಮನೆ ಮತ್ತು ವೆಂಕಟೇಶ್ವರ ದೇವಸ್ಥಾನದ ಸಮಿತಿಯವರ ಜತೆ ಚರ್ಚಿಸಿ ಅವರು ಒಪ್ಪಿಗೆ ನೀಡಿದರೆ ತಿರುಪತಿ ದೇವಸ್ಥಾನದ ಟ್ರಸ್ಟ್ ಅನುದಾನ ಮತ್ತು ಸಂಬಂಧಪಟ್ಟ ಇಲಾಖೆ ಜತೆಗೆ ಚರ್ಚಿಸಿ ಬಂಡಾಯದ ನಾಡನ್ನು ಸುಂದರ ಪ್ರವಾಸಿ ತಾಣವನ್ನಾಗಿ ಮಾಡಲು ಪ್ರಯತ್ನ ಮಾಡುವುದಾಗಿ ಹೇಳಿದರು.
ಶಾಸಕ ಬಿ.ಆರ್. ಯಾವಗಲ್, ಎಸ್.ಆರ್. ಪಾಟೀಲ, ರಾಜು ಕಲಾಲ, ಸಿ.ಬಿ.ಪಾಟೀಲ, ಗುರುಪಾದಪ್ಪ ಕುರಹಟ್ಟಿ, ಪ್ರವೀಣ ಯಾವಗಲ್, ದ್ಯಾಮಣ್ಣ ಸವದತ್ತಿ, ಶಿವನಗೌಡ ಹೆಬ್ಬಳ್ಳಿ, ಬಸಪ್ಪ ನರಗುಂದ, ದೀಪಕ ಗೋಡ್ಸ್, ನಾಗಪ್ಪ ನವಲಗುಂದ, ಮಹೇಶ ಪವಾರ, ಮಹೇಶ ಬಡಿಗೇರ, ವಿಠ್ಠಲ ಶಿಂದೆ, ಜಗದೇಶ ರಾಯನಗೌಡ್ರ, ವೆಂಕರಡ್ಡಿ ದೇವರಡ್ಡಿಯವರು, ಪುರಸಭೆ ಅಧಿಕಾರಿ ಎಸ್. ರಾಜಶೇಕರ, ಬಿ.ಎ. ನದಾಫ್, ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

