ದೇಶದ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸಿ
ಗದಗ: ದೇಶದ ಉಜ್ವಲ ಭವಿಷ್ಯಕ್ಕಾಗಿ ಯುವಕರು ಹಾಗೂ ವಾಣಿಜ್ಯೋದ್ಯಮಿಗಳು ಸದಾ ಕಂಕಣ ಬದ್ಧರಾಗಿ ಶ್ರಮಿಸುವುದು ಅತಿ ಅವಶ್ಯವಾಗಿದೆ ಎಂದು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಎಲ್.ಸಿ. ಲಿಂಬಯ್ಯಸ್ವಾಮಿಮಠ ಹೇಳಿದರು.
ಅವರು ಭಾನುವಾರ ನಗರದ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 65ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ವಿಶ್ವದ ಎಲ್ಲ ರಂಗದಲ್ಲಿಯೂ ಭಾರತವು ಅಭಿವೃದ್ಧಿಯ ದಿಸೆಯಲ್ಲಿ ತನ್ನದೇ ಆದ ಸ್ಥಾನ ಗಳಿಸಿಕೊಂಡಿದೆ. ಭಾರತವು ಅಮೂಲ್ಯವಾದ ಹಲವು ಸಂಪನ್ಮೂಲಗಳನ್ನು ಒಳಗೊಂಡಿದೆ. ಅವುಗಳನ್ನು ಸದುಪಯೋಗ ಮಾಡಿಕೊಳ್ಳುವುದರ ಜತೆಗೆ ಸಮೃದ್ಧ, ಸದೃಢ ಹಾಗೂ ಬಲಿಷ್ಠ ದೇಶ ಕಟ್ಟುವ ಕೆಲಸ ಮಾಡಬೇಕಿದೆ.
ಭಾರತದಲ್ಲಿ ಇರುವಷ್ಟು ವೈವಿದ್ಯತೆ ಜಗತ್ತಿನ ಯಾವುದೇ ರಾಷ್ಟ್ರದಲ್ಲಿ ಇಲ್ಲ. ಭಾರತವೆಂಬುದು ಕೇವಲ ಜಗತ್ತಿನ ಒಂದು ದೇಶವಲ್ಲ. ಇದೇ ಒಂದು ಜಗತ್ತು. ಜಗತ್ತಿನ ಎಲ್ಲೆಡೆ ಇರಬಹುದಾದ ಎಲ್ಲ ಸಂಸ್ಕೃತಿ ಈ ಒಂದೇ ನೋಡಲು ಸಾಧ್ಯ.
ಇಂತಹ ಪುಣ್ಯ ಭೂಮಿಯಲ್ಲಿ ನಾವು ಜನಿಸಿರುವುದು ಹೆಮ್ಮೆಯ ಸಂಗತಿ. ದೇಶವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಾಕಷ್ಟು ಪ್ರಗತಿಯನ್ನು ಕಂಡಿದೆ. ಮುಂದಿನ ದಿನಗಳಲ್ಲಿ ಜಗತ್ತಿನ ಚಿತ್ರಣವೇ ಬದಲಾಗಲು ಯುವ ಉದ್ಯಮಿದಾರರು ಮುಂದೆ ಬರಬೇಕು ಎಂದರು.
ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ವಾಣಿಜ್ಯೋದ್ಯಮಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಂಸ್ಥೆಯ ಗೌರವ ಕಾರ್ಯದರ್ಶಿ ವೀರಣ್ಣ ಬೇವಿನಮರದ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

