ರೋಣ: ಗಣರಾಜ್ಯೋತ್ಸವ ಸಂಭ್ರಮ
ರೋಣ: ಪಟ್ಟಣದ ಜನತೆಯ ನೀರಿನ ಸಮಸ್ಯೆ ನಿವಾರಣೆಗೆ ತಾಲೂಕಿನ ಜಿಗಳೂರ ಬಳಿ ನಿರ್ಮಿಸಲಾಗುತ್ತಿರುವ 310 ಎಕರೆ ವಿಸ್ತೀರ್ಣದ ಬೃಹತ್ ಕೆರೆಯಿಂದ ಪಟ್ಟಣಕ್ಕೆ ನೀರು ಪೂರೈಸಲಾಗುವುದು. ಇದಕ್ಕಾಗಿ ಹೆಚ್ಚುವರಿಯಾಗಿ ರು. 40 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅವರು ಭಾನುವಾರ ಪಟ್ಟಣದ ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆ ವತಿಯಿಂದ ಜರುಗಿದ 65ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸದ್ಯ ಪಟ್ಟಣಕ್ಕೆ ಮಲಪ್ರಭೆ ನದಿಯಿಂದ ನೀರು ಪೂರೈಕೆಯಾಗುತ್ತಿದ್ದು, ಕಳೆದ 10 ವರ್ಷಗಳಿಂದ ಬೇಸಿಗೆ ಸಮಯದಲ್ಲಿ ನದಿಯಲ್ಲಿ ನೀರಿನ ಕೊರತೆಯಾಗುತ್ತಿದೆ. ಇದರಿಂದ ರೋಣ ಜನತೆ, ರೈತರು, ಜಾನುವಾರುಗಳಿಗೆ ನೀರಿನ ತಿವ್ರ ಸಮಸ್ಯೆ ಎದುರಾಗುತ್ತಿದೆ. ಆದ್ದರಿಂದ ಜಿಗಳೂರ ಹತ್ತಿರದಲ್ಲಿ ನಿರ್ಮಾಣವಾಗುತ್ತಿರುವ ಕೆರೆಯಿಂದ ಪಟ್ಟಣಕ್ಕೆ ನೀರು ಸರಬರಾಜು ಮಾಡಲಾಗುವುದು. ಈಗಾಗಲೇ ಈ ಕುರಿತು ಯೋಜನೆಯನ್ನು ರೂಪಿಸಲಾಗಿದೆ. ತಾಲೂಕಿನಲ್ಲಿ ಹಲವಾರು ದಶಕಗಳಿಂದ ಅಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವಾಡುತ್ತಿದ್ದು, ಪರಿಹಾರ ದೊರಕಿಸುವ ನಿಟ್ಟಿನಲ್ಲಿ ರು. 10 ಕೋಟಿ ಮೀಸಲಿರಿಸಲಾಗಿದೆ ಎಂದರು.
ಧ್ವಜಾರೋಹಣ ನೆರವೇರಿಸಿ ತಹಸೀಲ್ದಾರ್ ಎ.ಜಿ. ಪಂಡೀತ ಮಾತನಾಡಿದರು. ತಾಲೂಕು ಆಡಳಿತ ವತಿಯಂದ ಪತ್ರಕರ್ತ ಡಿ.ಜಿ. ಮೋಮಿನ್ ಮತ್ತು ತಾಲೂಕು ನೌಕರ ಸಂಘದ ಅಧ್ಯಕ್ಷ ಶಿವಪುತ್ರಪ್ಪ ದೊಡ್ಡಮನಿ ಅವರನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ತಾಪಂ ಅಧ್ಯಕ್ಷೆ ತಿಪ್ಪವ್ವ ದೊಡ್ಡಮನಿ, ಉಪಾಧ್ಯಕ್ಷೆ ಶೈಲಜಾ ಯರಗೇರಿ, ವಿ.ಆರ್. ಗುಡಿಸಾಗರ, ಯೂಸೂಫ್ ಇಟಗಿ, ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳದ, ಉಪಾಧ್ಯಕ್ಷೆ ಲಕ್ಷ್ಮೀ ಗಡಗಿ, ಸದಸ್ಯ ಮಂಜುನಾಥ ಹಾಳಕೇರಿ, ಖಾದರಸಾಬ್ ಮುಗನೂರ, ವಿ.ಬಿ. ಸೋಮನಕಟ್ಟಿಮಠ, ತಾಪಂ ಸದಸ್ಯ ಅಂದಪ್ಪ ಬಿಚ್ಚೂರ, ಶಿವಪುತ್ರಪ್ಪ ದೊಡ್ಡಮನಿ, ಪತ್ರಕರ್ತ ರಾಘವೇಂದ್ರ ಕುಲಕರ್ಣಿ, ಎಸ್.ಎ. ಸೂಡಿಶೆಟ್ಟರ, ಗಾಯತ್ರಿ ನಾಗನೂರ, ಗೀತಾ ಕೊಪ್ಪದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಬಿಇಒ ಡಿ.ಐ. ಅಸುಂಡಿ ಸ್ವಾಗತಿಸಿದರು. ಎಸ್.ವೈ. ಯಡಳ್ಳಿ ನಿರೂಪಿಸಿದರು. ಎನ್.ಎಸ್. ಕೂಡಲ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

