ಗದಗ

ಅಂಗನವಾಡಿ ಹುದ್ದೆಗಳ ಭರ್ತಿಗೆ ಆಗ್ರಹ

Published On :

ಗದಗ: ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರ ಆಯಾಗಳ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಕರವೇ ಗದಗ ಘಟಕದ ಜಿಲ್ಲಾಧ್ಯಕ್ಷ ವೆಂಕಟೇಶ ದಾಸರ, ಶಿವಬಸವ ಜನಕಲ್ಯಾಣ ಸಂಸ್ಥೆಯ ಅಧ್ಯಕ್ಷ ಬಸವಣ್ಣೆಯ್ಯ ಹಿರೇಮಠ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಲವಾರು ತಿಂಗಳಿನಿಂದ ಗದಗ ಜಿಲ್ಲೆಯ ಗದಗ, ಮುಂಡರಗಿ, ಶಿರಹಟ್ಟಿ, ರೋಣ ತಾಲೂಕುಗಳ 32 ಅಂಗನವಾಡಿ ಕಾರ್ಯಕರ್ತೆಯರ, 56 ಆಯಾಗಳ ಹುದ್ದೆ ಖಾಲಿ ಇದ್ದು, ಈ ಕುರಿತು ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಹುದ್ದೆಯ ಆಕಾಂಕ್ಷೆಗಳು ಅರ್ಜಿ ಹಾಕಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ಸಂಗತಿ ಒಂದಡೆಯಾದರೆ ಖಾಲಿಯಿರುವ ಹುದ್ದೆಗಳಿಗೆ ಸ್ಥಳೀಯ ಅಂಗನವಾಡಿ ಕಾರ್ಯಕರ್ತರನ್ನು ಹೆಚ್ಚುವರಿಯಾಗಿ ನೇಮಿಸಿರುವುದು ಕೆಲವೊಂದು ಅಂಗನವಾಡಿಗಳಲ್ಲಿ ಮಕ್ಕಳ ಹಾಜರಿ ಗಣನೀಯವಾಗಿ ಇಳಿಯುತ್ತಲಿದೆ.
ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಗದಗ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕ್ರಿಯಾಶೀಲ ಅಧಿಕಾರಿಗಳ ಶ್ರಮದಿಂದ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಕಡಿಮೆ ಎನ್ನಬಹುದು. ಗದಗ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳಿಗೆ ಭರ್ತಿಮಾಡಿಕೊಳ್ಳದೆ ಇರುವುದರಿಂದ ಶಾಲೆಗೆ ಬರುವ ಮಕ್ಕಳ ಸಂಖ್ಯೆ ಕಡಿಮೆಯಾಗಿ ಅಂಗನವಾಡಿಯಲ್ಲಿ ಲಭ್ಯವಾಗಿರುವ ಪೌಷ್ಟಿಕ ಆಹಾರಗಳ ಕೊರತೆಯಿಂದ ಬರಲಿರುವ ದಿನಗಳಲ್ಲಿ ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳು ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನು ಅರಿತುಕೊಂಡು ಜಿಲ್ಲಾಡಳಿತ ಗದಗ ಜಿಲ್ಲೆಯ ಅಂಗನವಾಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಣಿಯಾಗಬೇಕು. ವಿಳಂಬವಾದಲ್ಲಿ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಸಾವಿಗೀಡಾದರೆ ಜಿಲ್ಲಾಡಳಿತವೇ ಹೊಣೆಯಾಗಬೇಕಾಗುತ್ತದೆ ಎಂದು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.