ಗದಗ

ಅತಿಥಿ ಉಪನ್ಯಾಸಕರ ಬಂಧನ ಖಂಡಿಸಿ ಗದಗದಲ್ಲಿ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಗದಗ, ಜ. 29
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾ ನಿರತ 1 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು, ಎಸ್‌ಎಫ್‌ಐ, ಡಿವೈಎಫ್‌ಐ ಮುಖಂಡರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಎಸ್‌ಎಫ್‌ಐ ಹಾಗೂ ಡಿವೈಎಫ್‌ಐ ಜಿಲ್ಲಾ ಸಮಿತಿಗಳು ಮಂಗಳವಾರ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಪೀರು ರಾಠೋಡ ಮಾತನಾಡಿ, 350 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 10650 ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುತ್ತೇವೆಂದು ನೀಡಿದ್ದ ಭರವಸೆ ಹುಸಿಯಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುವ ಹಂತದಲ್ಲಿದ್ದರೂ ಬೇಡಿಕೆಗಳನ್ನು ಈಡೇರಿಸುವ ಬದಲಿಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈಗಿರುವ ಎಲ್ಲ ಅತಿಥಿ ಉಪನ್ಯಾಸಕರನ್ನು ಕೈ ಬಿಡುವ ಹುನ್ನಾರ ನಡೆಸಲಾಗುತ್ತದೆ. ಇದರಿಂದಾಗಿ 10-15 ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆಯಲ್ಲಿದ್ದವರು ಈಗ ಬೀದಿಗೆ ಬೀಳುವಂತಾಗಿದೆ. ಈ ಹೋರಾಟಕ್ಕೆ ನಾಡಿನ ಚಿಂತಕರು ವಿದ್ಯಾರ್ಥಿ-ಪೋಷಕರೂ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹೋರಾಟ ಕೇವಲ ಅತಿಥಿ ಉಪನ್ಯಾಸಕರ ವೇತನ ಅಥವಾ ಉದ್ಯೋಗ ಭದ್ರತೆಗೆ ಮಾತ್ರ ಸೀಮಿತವಾದುದ್ದಲ್ಲ. ಬದಲಿಗೆ ಉನ್ನತ ಶಿಕ್ಷಣವನ್ನು ಸಾಮಾನ್ಯ ಬಡ ವಿದ್ಯಾರ್ಥಿಗಳಿಗೆ ಉಳಿಸುವ ಹೋರಾಟವೂ ಆಗಿದೆ ಎಂದರು. ಡಿವೈಎಫ್‌ಐ ಜಿಲ್ಲಾ ಮುಖಂಡ ಎಂ.ಎಸ್. ಹಡಪದ ಮತ್ತು ಮಹಾಗುಂಡಪ್ಪ ಅಂಗಡಿ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನೇ ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ ಸೇವಾ ಭದ್ರತೆ ಒದಗಿಸಬೇಕು. 1979, 1983, 2013ರಲ್ಲಿ ಅರೆಕಾಲಿಕ ಉಪನ್ಯಾಸಕರನ್ನು ಕಾಯಂ ಗೊಳಿಸಿದ ಹಾಗೆ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಹಾಗೂ ಆಂಧ್ರಪ್ರದೇಶ, ಕೇರಳ, ತ್ರಿಪುರ, ಪಂಜಾಬ, ಗುಜರಾತ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಯುಜಿಸಿ ನಿಯಮವನ್ನೇ ಅನುಸರಿಸಿ, ಮಾಸಿಕ ರು. 25 ಸಾವಿರ ವೇತನವನ್ನು ಪ್ರತಿ ತಿಂಗಳ ಮೊದಲ ವಾರದಲ್ಲೇ ನೀಡಬೇಕು ಎಂದು ಒತ್ತಾಯಿಸಿದರು. ಎಸ್‌ಎಫ್‌ಐ ಜಿಲ್ಲಾ ಮುಖಂಡ ಶರಣಯ್ಯ ಸೂಗಿರಯ್ಯನಮಠ, ಸಾಗರ ಮಾಡಳ್ಳಿ, ರಾಕೇಶ ನಾಯ್ಕ, ಮಾರುತಿ ತಳವಾರ, ಚೇತನ ಕಳ್ಳಿಮಠ, ಸುಧಾ ರಡ್ಡಿಯವರ, ವಿಜಯಲಕ್ಷ್ಮಿ ಲಿಂಗನಗೌಡ, ಕಮಲ ಬಾಪಣ್ಣವರ, ನೇಹಾಲ್‌ಸಿಂಗ್ ಬ್ಯಾಳಿ, ಎಂ.ಕೆ. ತಹಶೀಲ್ದಾರ, ಸುನಿತಾ, ಸುಜಾತಾ, ಶಶಿ, ಸರಸ್ವತಿ ಮುಂತಾದವರು ಪ್ರತಿಭಟನೆಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.