ಸಾಧನೆ ಸಂಕಲ್ಪ ಸಾಕಾರಕ್ಕೆ ಪ್ರಯತ್ನ ಅವಶ್ಯ
ಮುಂಡರಗಿ: ಯಾವುದೇ ಕ್ಷೇತ್ರದಲ್ಲಿನ ಯಶಸ್ಸು ಹಾಗೂ ಸಾಧನೆಗೆ ಸಾಕಷ್ಟು ಪ್ರಯತ್ನ ಮಾಡುವುದು ಅವಶ್ಯವಾಗಿದೆ ಎಂದು ಸ್ಥಳೀಯ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯ ಪ್ರಬಂಧಕ ಆರ್.ಕೆ. ಬಸವರಾಜ ಹೇಳಿದರು.
ಅವರು ಬುಧವಾರ ಪಟ್ಟಣದ ಕೆ.ಆರ್. ಬೆಲ್ಲದ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಆಶ್ರಯದಲ್ಲಿ ಏರ್ಪಡಿಸಿದ್ದ ಬ್ಯಾಂಕಿಂಗ್ ಪರೀಕ್ಷಾ ಪೂರ್ವಭಾವಿ ತರಬೇತಿ ಶಿಬಿರ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಕ್ ಪರೀಕ್ಷೆ ಎದುರಿಸಲು ಪೂರ್ವಭಾವಿ ತರಬೇತಿ ಅವಶ್ಯಕತೆ ಅರಿತು ತಮ್ಮ ಬ್ಯಾಂಕ್ ಹಾಗೂ ಕಾಲೇಜಿನ ಸಹಕಾರದಲ್ಲಿ 10 ದಿನಗಳ ತರಬೇತಿ ಏರ್ಪಡಿಸಿದಾಗ ತರಬೇತುದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದು ನಿರಂತರ ಮುಂದುವರಿಯಬೇಕು. ಈಗೀಗ ಬ್ಯಾಂಕಿಂಗ್ ಕ್ಷೇತ್ರ ಬಿಟ್ಟು ಇತರ ನೇಮಕಾತಿಗಳು ಕಡಿಮೆಯಾಗುತ್ತಿವೆ ಹಾಗೂ ವಿಳಂಬವಾಗುತ್ತಿವೆ. ಕಾರಣ ವಿದ್ಯಾರ್ಥಿಗಳು ತರಬೇತಿ ಪಡೆಯಲು ಹೆಚ್ಚು ಒಲುವು ಆಸಕ್ತಿ ತೋರಬೇಕು ಎಂದರು.
ಪ್ರಾ. ಎಂ.ಬಿ. ಬೆಳವಟಗಿ ಮಾತನಾಡಿದರು. ಆರ್.ಬಿ. ಡಂಬಳಮಠ ಅಧ್ಯಕ್ಷತೆ ವಹಿಸಿದ್ದರು. ಗಣೇಶರಾವ್ ಕುದರಿ, ಯಾಶ್ಮೀನ್ ಮುಲ್ಲಾ, ಡಿ.ಬಿ. ತಾಳಗೇರಿ ಮಾತನಾಡಿದರು. ಹಳೆಯ ವಿದ್ಯಾರ್ಥಿ ವೀರೇಶ ಬಿಸನಳ್ಳಿ ಅವರನ್ನು ಕವಿವಿ ಎಂಎ ಹಿಂದಿಯಲ್ಲಿ ಚಿನ್ನದ ಪದಕ ಪಡೆದ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು. ಅಜಯ್ ಸಾವ್, ವೈ.ಎಸ್. ನಾಯಕ, ಶರತ ಕಿರಣ, ಪ್ರವೀಣ ಕೆ.ಎಸ್. ಎಂ.ಜಿ. ಗಚ್ಚಣ್ಣವರ ತರಬೇತಿ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ವಿ.ಎಫ್. ಅಂಗಡಿ, ಬಿ.ಎಫ್. ಈಟಿ, ಆರ್.ಎಲ್. ಪೊಲೀಸ್ಪಾಟೀಲ, ಡಾ. ಬಿ.ಜಿ. ಜವಳಿ, ಎನ್.ಎಫ್. ದ್ಯಾವಣ್ಣವರ, ಡಿ.ಎಸ್. ನಾಯಕ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ಆರ್.ಕೆ. ರಾಯನಗೌಡ ಸ್ವಾಗತಿಸಿದರು. ಎಸ್.ಆರ್. ಬಸಾಪುರ ನಿರೂಪಿಸಿದರು.
--
ಸ್ವಯಂ ಉದ್ಯೋಗಕ್ಕೆ ಮುಂದಾಗಲಿ
ಕನ್ನಡಪ್ರಭ ವಾರ್ತೆ, ಗದಗ, ಜ. 30
ಸ್ವಯಂ ಉದ್ಯೋಗ ಪ್ರಾರಂಭಿಸಲು ಮಹಿಳೆಯರು ಮುಂದಾಗಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಐ. ಕುಂಬಾರ ಹೇಳಿದರು.
ಅವರು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಭವನದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಮಹೇಶ್ವರಿ ವಿವಿಧೋದ್ದೇಶಗಳ ಮಹಿಳಾ ಮಂಡಳಗಳ ಆಶ್ರಯದಲ್ಲಿ ಬುಧವಾರ ಸಂಜೆ ಹಮ್ಮಿಕೊಂಡ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ತರಬೇತಿ ಪ್ರಮಾಣಪತ್ರ ನೀಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಿ ತರಬೇತಿ ನೀಡಿ ಅವರಿಗೆ ಸಾಲ ಸೌಲಭ್ಯ ಒದಗಿಸುವ ಜತೆಗೆ ಸಬ್ಸಿಡಿ ಕೊಟ್ಟು ಮಹಿಳೆಯರು ಸ್ವಯಂ ಉದ್ಯೋಗ ಪ್ರಾರಂಭಿಸಲು ಅನುಕೂಲ ಮಾಡಿಕೊಡಲಾಗುತ್ತದೆ. ಈ ನಿಟ್ಟಿನಲ್ಲಿ ತರಬೇತಿಯನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಅಭಿವೃದ್ಧಿ ಸಾಧಿಸಬೇಕು ಎಂದರು.
ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಕೆ. ಶರವಣಕುಮಾರ ಮಾತನಾಡಿ, ತರಬೇತಿದಾರರು ತಮ್ಮ ಭಾಗದಲ್ಲಿ ಯಾವ ವಸ್ತುಗಳಿಗೆ ಬೇಡಿಕೆ ಇರುತ್ತದೆಯೋ ಅದಕ್ಕೆ ಹೆಚ್ಚಿನ ಪ್ರಾಶಸ್ತ ನೀಡಿ ಅವುಗಳನ್ನು ತಯಾರ ಮಾಡಿ ಮಾರಾಟ ಮಾಡುವುದರಿಂದ ಹೆಚ್ಚಿನ ಲಾಭ ಪಡೆದುಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷ ದೇವದಾಸ ಕಾಮತ ಮಾತನಾಡಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಸಿ.ಪಿ. ಮಾಡಳ್ಳಿ ಸ್ವಾಗತಿಸಿದರು. ಸಂಸ್ಥೆಯ ಗೌರವ ಕಾರ್ಯದರ್ಶಿ ವೀರಣ್ಣ ಬೇವಿನಮರದ ನಿರೂಪಿಸಿದರು. ಮಹೇಶ್ವರಿ ವಿವಿಧೋದ್ದೇಶಗಳ ಮಹಿಳಾ ಮಂಡಳದ ಅಧ್ಯಕ್ಷ ಜಯಶ್ರೀ ಹಿರೇಮಠ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

